ಮೈಸೂರು:ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಅಧಿಕಾರ ನೀಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಮೊದಲ ಹಂತದಲ್ಲಿ ಸುಮಾರು 500 ಕಾರ್ಯಕರ್ತರಿಗೆ ನಿರ್ದೇಶಕ ಮತ್ತು ಸದಸ್ಯ ಸ್ಥಾನಗಳನ್ನು ನೀಡಲಾಗುತ್ತಿದ್ದು, ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಮೈಸೂರಿನಲ್ಲಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಟ್ಟಿಗೆ ಈಗಾಗಲೇ ಸಹಿ ಹಾಕಿದ್ದೇನೆ. ಸದ್ಯ ವರ್ಗೀಕರಣದ ಕೆಲಸ ನಡೆಯುತ್ತಿದೆ. ಅದು ಪೂರ್ಣಗೊಂಡ ಕೂಡಲೇ ಪಟ್ಟಿ ಪ್ರಕಟಿಸಲಾಗುವುದು ಎಂದರು.ಒಟ್ಟು ಮೂರು ಹಂತಗಳಲ್ಲಿ ಅಧಿಕಾರ ಹಂಚಿಕೆ ಮಾಡಲಾಗುತ್ತದೆ. ಮೊದಲ ಪಟ್ಟಿಯಲ್ಲಿ ನಿಗಮ ಮತ್ತು ಮಂಡಳಿಗಳ ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗುತ್ತದೆ. ಮುಂದಿನ ಎರಡು ಪಟ್ಟಿಗಳಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ನೇಮಕ ನಡೆಯಲಿದೆ. ಕೆಲವು ಶಾಸಕರಿಗೂ ಸ್ಥಾನ ನೀಡಬೇಕಿದ್ದು, ಆ ಬಗ್ಗೆಯೂ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
































