ಬೆಂಗಳೂರು: ಲೋಕಸಭೆ ಚುನಾವಣೆಗೂ ಮೊದಲೇ, ಕಾಂಗ್ರೆಸ್ನ 44 ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಭಾಗ್ಯ ಸಿಕ್ಕಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನೇಮಕಾತಿ ಪಟ್ಟಿಗೆ ಬುಧವಾರ ಅನುಮೋದನೆ ನೀಡಿದ್ದು, ಆಯಾ ಇಲಾಖೆಗಳಿಗೆ ರವಾನೆಯಾಗಿದೆ. ಗುರುವಾರ (ಫೆ.29) ಇಲಾಖೆಗಳಿಂದ
ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ತಿಳಿಸಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರಕ್ಕೆ ಬಂದಿತ್ತು. 135 ಸ್ಥಾನ ಗೆದ್ದು ಅಧಿಕಾರ ಹಿಡಿದಿದ್ದರಿಂದಾಗಿ, ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ದೊಡ್ಡದಿತ್ತು. ಸಚಿವಗಿರಿ ಕೈತಪ್ಪಿದ ಶಾಸಕರ ಅಸಮಾಧಾನ ತಣಿಸಲು ನಿಗಮ–ಮಂಡಳಿಗಳಿಗೆ ನೇಮಕ ಮಾಡುವ ಭರವಸೆ ನೀಡಲಾಗಿತ್ತು. ಶಾಸಕರು, ಮುಖಂಡರಿಗೆ ಅಧ್ಯಕ್ಷ ಸ್ಥಾನ ದೊರೆಯುವ ಸಾಧ್ಯತೆ ಇದೆ.