ಸುಬ್ರಹ್ಮಣ್ಯ:ಜೆ.ಡಿ.ಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ನೀಡಿದರು..ದಂಪತಿ ಸಮೇತ ಭೇಟಿ ನೀಡಿದ ಅವರು ದೇವರ ದರ್ಶನ ಪಡೆದು ತೆರಳಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸರಕಾರ ಕಳೆದ ಒಂದುವರೆ ವರ್ಷದ ಆಡಳಿತ ಸಂಪೂರ್ಣ
ವಿಫಲವಾಗಿದೆ. ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇನೆ. ಈಗಾಗಲೇ ಜೆಡಿಎಸ್ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸದಸ್ಯತ್ವ ನೋಂದಣಿ ಹಾಗೂ ಬೂತ್ ಕಮಿಟಿಯನ್ನು ರಚನೆ ಮಾಡಲಾಗಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಜೆಡಿಎಸ್ ಬಲವರ್ಧನೆಗೊಳ್ಳಲಿದೆ. ಪಕ್ಷದ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
Pಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಾಕೆ ಮಾಧವ ಗೌಡ ಜಾಕೆ , ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್, ಪ್ರಮುಖರಾದ ಸಂತೋಷ್ ಜಾಕೆ , ಗೋಪಾಲ ಎಣ್ಣೆ ಮಜಲು, ಶಿವರಾಮ ಏನೆಕಲ್, ಡಾ.ಎ. ಎ. ತಿಲಕ್, ವಿಶ್ವನಾಥ ನಡುತೋಟ, ನಾರಾಯಣ ಅಗ್ರಹಾರ, ಲೊಕೇಶ ಬಿ.ಎನ್, ಜಯರಾಮ ಕಟ್ಟೆಮನೆ, ಮುಂತಾದವರು ಉಪಸ್ಥಿತರಿದ್ದರು.