ಪಟ್ನಾ:ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ನಾಮಪತ್ರ ಸಲ್ಲಿಸಿದ್ದಾರೆ.ಇವರ ಜೊತೆಗೆ ಇತರ ಮೂವರು ಅಭ್ಯರ್ಥಿಗಳನ್ನು ಕೂಡ ಎನ್ಡಿಎ ಕಣಕ್ಕಿಳಿಸಿದ್ದು, ಎಲ್ಲ ಐದು ಸ್ಥಾನಗಳನ್ನು
ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ. ನಿತೀಶ್ ಕುಮಾರ್, ನಿತಿನ್ ನವೀನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ನಾಮಪತ್ರಗಳನ್ನು ಸಲ್ಲಿಸಿದರು.ಎನ್ಡಿಎದ ಇತರ ಅಭ್ಯರ್ಥಿಗಳಾದ ಕೇಂದ್ರ ಸಚಿವ ರಾಮನಾಥ್ ಠಾಕೂರ್(ಜೆಡಿಯು), ಆರ್ಎಲ್ಎಂ ಅಧ್ಯಕ್ಷ ಉಪೇಂದ್ರ ಕುಶ್ವಾಹ, ಬಿಜೆಪಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶಿವೇಶ್ ಕುಮಾರ್ ಕೂಡ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.ವಿರೋಧ ಪಕ್ಷ ಆರ್ಜೆಡಿ ಕೂಡ ತನ್ನ ಉಮೇದುವಾರನನ್ನು ಕಣಕ್ಕಿಳಿಸಿದೆ. ನಿತೀಶ್ ಕುಮಾರ್ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿರುವ ಹಿನ್ನಲೆಯಲ್ಲಿ ಬಿಹಾರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವ ಸಾಧ್ಯತೆ ಇದೆ.ಬಿಹಾರದಲ್ಲಿ ಬಿಜೆಪಿ ಮುಖ್ಯಮಂತ್ರಿ ಅಧಿಕಾರಕ್ಕೆ ಏರುವ ಸಾಧ್ಯತೆ ಇದೆ.








