ನವದೆಹಲಿ: ಜೆಡಿಯು ರಾಷ್ಟ್ರೀಯ ಅಧ್ಯಕ್ಷ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು (ಶುಕ್ರವಾರ) ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಮಾ.16ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದ
ನಿತೀಶ್ ಕುಮಾರ್ ಅವರು ಮಾರ್ಚ್ 30ರಂದು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ನಿತೀಶ್ ಅವರು ರಾಜ್ಯಸಭೆಗೆ ಆಯ್ಕೆಯಾಗಿರುವುದರಿಂದ ಬಿಹಾರ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಲು ಕ್ಷಣಗಣನೆ ಆರಂಭವಾಗಿದೆ.
ನಿತೀಶ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹೊಸ ಸಚಿವ ಸಂಪುಟ ರಚನೆಯ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಹಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಂಜಯ್ ಸರೋಗಿ ಹೇಳಿದ್ದಾರೆ.











