ಸುಳ್ಯ: ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ ಪೇರಾಲು ನೇಮಕವಾಗಿದ್ದಾರೆ. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಮತ್ತು
ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಯವರ ಉಪಸ್ಥಿತಿಯಲ್ಲಿ ಅವರು ಮೇ.28 ಮಂಗಳವಾರದಂದು ಜವಾಬ್ದಾರಿ ವಹಿಸಿಕೊಂಡರು. ಇವರು ಈ ಹಿಂದೆ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ವಿದ್ಯಾರ್ಥಿ ಕ್ಷೇಮಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.