ಸುಳ್ಯ:ಯುವಜನತೆ ಹೊಸ ಆಲೋಚನೆಗಳೊಂದಿಗೆ ಮುನ್ನಡೆಯುವ ಅವಶ್ಯಕತೆಯಿದೆ. ದೇಶದ ಯುವ ಸಂಪತ್ತು ಸಕಾರಾತ್ಮಕ ರೀತಿಯಲ್ಲಿ ವಿನಿಯೋಗವಾದರೆ ಭಾರತ ಮುಂದೆ ಸದೃಢ ದೇಶವಾಗಿ ನಿಲ್ಲುವ ಸಾಧ್ಯತೆಯಿದೆ ಎಂದು ಡಾ. ಕೆ ಶಿವರಾಮ ಕಾರಂತ ಸರಕಾರಿ ಪದವಿ ಕಾಲೇಜು ಪೆರುವಾಜೆಯ ಪ್ರಾಂಶುಪಾಲರಾದ ಪ್ರೊ. ದಾಮೋದರ ಕಣಜಾಲು ಹೇಳಿದರು.ಅವರು ಸುಳ್ಯ ನೆಹರು ಮೆಮೊರಿಯಲ್ ಪದವಿ
ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಇದರ ಅಧ್ಯಕ್ಷ ಡಾ. ಕೆ.ವಿ ಚಿದಾನಂದ ಇವರು ವಹಿಸಿ ಶುಭಹಾರೈಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ.ಎಂ ಪ್ರಾಸ್ತಾವಿಕ ಮಾತುಗಳ್ನಾಡಿದರು. ವೇದಿಕೆಯಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಎಂ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ರತ್ನ ಸಿಂಚನ ಮತ್ತು ತಂಡದವರು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೋಸ್ಪಿನ್ ಬಾಬು ಸ್ವಾಗತಿಸಿ, ಉಪಾಧ್ಯಕ್ಷೆ ಕು. ನಿರೀಕ್ಷಾ ಜೆ ಅತಿಥಿಗಳನ್ನು ಪರಿಚಯಿಸಿ, ಕಾರ್ಯದರ್ಶಿ ಕೃಷ್ಣರಾಜ ಕೆ ಎಸ್ ವಂದಿಸಿದರು.ಗಾನ ಬಿ ಡಿ ಮತ್ತು ಅನ್ವಯ ಕಾರ್ಯಕ್ರಮ ನಿರೂಪಿಸಿದರು. ಕಾಲೇಜು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ಎಲ್ಲಾ ತರಗತಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.









