ಸುಳ್ಯ: ನೆಹರೂ ಮೆಮೋರಿಯಲ್ ಪದವಿ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ ಸಾಂಸ್ಕೃತಿಕ ಪರಂವ್ಹ ಹಮ್ಮಿಕೊಳ್ಳಲಾಯಿತು. ಅಕಾಡಮಿ ಆಫ್ ಲಿಬರಲ್ ಎಜುಕೇಷನ್ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ
ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಎಂ, ಕಾಲೇಜು ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಂಯೋಜಕಿ ಡಾ. ಮಮತಾ ಕೆ. ಸ್ವಾಗತಿಸಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ತಿಪ್ಪೇಸ್ವಾಮಿ ಡಿ ವಂದಿಸಿದರು.
ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ., ಸಾಂಸ್ಕೃತಿಕ ಸಂಘದ ಸಂಯೋಜಕ ವಿಷ್ಣುಪ್ರಶಾಂತ್ ಬಿ. ಉಪಸ್ಥಿತರಿದ್ದರು.

ರತ್ನ ಸಿಂಚನ ಮತ್ತು ತಂಡದವರು ಪ್ರಾರ್ಥಿಸಿದರು. ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಯ ಕಾರ್ಯದರ್ಶಿ ಹೇಮನಾಥ ಕುರುಂಜಿ ವಹಿಸಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು. ಸಾಂಸ್ಕೃತಿಕ ಉತ್ಸವದ ಚಾಂಪಿಯನ್ ಪ್ರಶಸ್ತಿಯನ್ನು ರೋಟರಿ ಪದವಿ ಪೂರ್ವ ಕಾಲೇಜು ಪಡೆದುಕೊಂಡಿತು. ರನ್ನರ್ಸ್ ಪ್ರಶಸ್ತಿಯನ್ನು ಎನ್ನೆಂಸಿ ಪದವಿ ಪೂರ್ವ ಕಾಲೇಜು ಸುಳ್ಯ ಪಡೆದುಕೊಂಡಿತು. ಬಹುಮಾನ ವಿಜೇತರ ಪಟ್ಟಿಯನ್ನು ಹರಿಪ್ರಸಾದ್ ವಾಚಿಸಿದರು.
ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು.









