ಸುಳ್ಯ:ಮಂಗಳೂರು ವಿಶ್ವವಿದ್ಯಾನಿಲಯದ ಅಂತಿಮ ಪದವಿ ಫಲಿತಾಂಶ ಪ್ರಕಟವಾಗಿದ್ದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಶೇ. 87.83 ಫಲಿತಾಂಶ ದಾಖಲಿಸಿದೆ.ಒಟ್ಟು 189 ವಿದ್ಯಾರ್ಥಿಗಳು ಅಂತಿಮ ವರ್ಷದ ಆರನೇ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಿದ್ದು 166 ವಿದ್ಯಾರ್ಥಿಗಳು
ಉತ್ತೀರ್ಣರಾಗಿದ್ದಾರೆ. ಅಂತಿಮ ಕಲಾ ಪದವಿಯಲ್ಲಿ ಒಟ್ಟು 24 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಶೇಕಡಾ 100 ಫಲಿತಾಂಶ ಗಳಿಸಿದೆ. 13 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಹೊಂದಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 70 ವಿದ್ಯಾರ್ಥಿಗಳಲ್ಲಿ ಪೈಕಿ 69 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು 56 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 81ಫಲಿತಾಂಶ ದೊರೆತಿದೆ. 29ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಪಡೆದುಕೊಂಡಿದ್ದಾರೆ.
ವಿಜ್ಞಾನ ವಿಭಾಗದ 64 ವಿದ್ಯಾರ್ಥಿಗಳಲ್ಲಿ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 89.06 ಫಲಿತಾಂಶ ದಾಖಲಾಗಿದೆ. ಒಟ್ಟು 45 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಹೊಂದಿದ್ದಾರೆ.
ಬಿ.ಬಿ.ಎ ತರಗತಿಯ 22 ವಿದ್ಯಾರ್ಥಿಗಳಲ್ಲಿ ಎಲ್ಲರೂ ತೇರ್ಗಡೆಯಾಗಿ ಶೇಕಡಾ 100ಫಲಿತಾಂಶ ಬಂದಿದೆ. 10ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಸಮಾಜ ಕಾರ್ಯ ವಿಭಾಗದ 9ವಿದ್ಯಾರ್ಥಿಗಳಲ್ಲಿ 7 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡಾ 78 ಫಲಿತಾಂಶ ಪಡೆದುಕೊಂಡಿದೆ. ಐದು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಅಂಕ ಪಡೆದುಕೊಂಡಿರುತ್ತಾರೆ.