ಸುಳ್ಯ: ದೇಶಭಕ್ತರ ತ್ಯಾಗ-ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದ್ದು ಇಂದು ರಾಷ್ಟ್ರ ಸೇವೆಗೈಯುತ್ತಿರುವ ಸೈನಿಕರ ಶ್ರಮದಿಂದ ನಾವು ನಿರ್ಭಿತರಾಗಿದ್ದೇವೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹೇಳಿದ್ದಾರೆ. ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಸ್ವಾತಂತ್ರ್ಯೋತ್ಸವ
ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಸುಳ್ಯದ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ ಸಿ , ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಬಾಲಚಂದ್ರ ಗೌಡ, ಡಾ. ಪೂವಪ್ಪ ಕಣಿಯೂರು, ಪ್ರಾಂಶುಪಾಲ ಪ್ರೊ. ರುದ್ರಕುಮಾರ್ ಎಂ. ಎಂ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ. ರತ್ನಾವತಿ ಡಿ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕಿ ಡಾ. ಮಮತಾ ಕೆ, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.