ಸುಳ್ಯ:ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕೆ.ಟಿ.ವಿಶ್ವನಾಥ್ ಆಯ್ಕೆಯಾಗಿದ್ದಾರೆ.ಪ್ರಧಾನ ಕಾರ್ಯದರ್ಶಿಯಾಗಿ ಮಧುರಾ ಎಂ.ಆರ್., ಕೋಶಾಧಿಕಾರಿ ಯಾಗಿ ಲೋಕೇಶ್ ಪೆರ್ಲಂಪಾಡಿ ಆಯ್ಕೆಯಾಗಿದ್ದಾರೆ. ಜೂ.13 ರಂದು
ಕಾಲೇಜು ಸಭಾಂಗಣದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್ ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ., ನಿವೃತ್ತ ಪ್ರಾಂಶುಪಾಲ ಪ್ರೊ.ಬಾಲಚಂದ್ರ ಗೌಡ, ಉಪನ್ಯಾಸಕ ಪ್ರತಿನಿಧಿ ಕುಲ್ ದೀಪ್ ಪೆಲತಡ್ಕ ವೇದಿಕೆಯಲ್ಲಿದ್ದರು.