ಸುಳ್ಯ: ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಓಣಂ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ರಿ. ಸುಳ್ಯದ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಸಿಂಗಾರಿ ಮೇಳದ
ಪ್ರದರ್ಶನ, ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಹಾಗೆಯೇ ವಿವಿಧ ಮನೋರಂಜನ ಕ್ರೀಡಾ ಸ್ಪರ್ಧೆಗಳನ್ನೂ ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಎಂ, ಪ್ರಾಂಶುಪಾಲರಾದ ಪ್ರೊ. ರುದ್ರ ಕುಮಾರ್ ಎಂ ಎಂ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ಕೃಪಾ ಎ ಎನ್ ಮತ್ತು ಹರಿಪ್ರಸಾದ್ ಅತ್ಯಾಡಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಉಪನ್ಯಾಸಕೇತರ ವೃಂದದವರು, ವಿದ್ಯಾರ್ಥಿಗಳು ಸಹಕರಿಸಿದರು.