ಸುಳ್ಯ:ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕನ್ನಡ ವಿಭಾಗ, ಕನ್ನಡ ಸಂಘ ಹಾಗೂ ಆಂತರಿಕ ಗುಣಮಟ್ಟ ಖಾತರಿಕೋಶದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ “ಕರ್ನಾಟಕ ಸುವರ್ಣ ಸಂಭ್ರಮ” ಆಚರಣೆ ಕಾಲೇಜಿನ ಷಷ್ಠ್ಯಬ್ದ ರಂಗಮಂದಿರದಲ್ಲಿ ಆಚರಿಸಲಾಯಿತು. ಕಾಲೇಜಿನ
ಶೈಕ್ಷಣಿಕ ಸಲಹೆಗಾರ ಪ್ರೊ. ಎಂ ಬಾಲಚಂದ್ರ ಗೌಡ ದೀಪ ಪ್ರಜ್ವಲನೆ ಮಾಡಿ ಕನ್ನಡ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ., ಆಂತರಿಕ ಗುಣಮಟ್ಟ ಖಾತರಿಕೋಶದ ಸಂಚಾಲಕಿ ಡಾಮಮತಾ ಕೆ ಕಾಲೇಜಿನ ಬೋಧಕ- ಬೋಧಕೇತರ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಂಜೀವ ಕುದ್ಪಾಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ, ಕನ್ನಡ ಸಂಘದ ಸಂಚಾಲಕಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದ ಸಮರ್ಪಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಕನ್ನಡದ ಪಂಚ ಗೀತೆಗಳನ್ನು ಗಾಯನ ಮಾಡಿದರು