ಸುಳ್ಯ: ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ರೆಡ್ ಕ್ರಾಸ್ ದಿನಾಚರಣೆಯನ್ನು ಆಯೋಜಿಸಲಾಯಿತು. ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಹಮ್ಮಿಕೊಂಡ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮವನ್ನು “ಸ್ವಚ್ಛತೆ – ಆರೋಗ್ಯ- ರಕ್ಷಣೆ- ಬದುಕು” ಎಂಬ
ಶೀರ್ಷಿಕೆಯಡಿಯಲ್ಲಿ ಮಾಹಿತಿ ಹಾಗೂ ಗೌರವಾರ್ಪಣೆ ಕಾರ್ಯಕ್ರಮದೊಂದಿಗೆ ನಡೆಸಲಾಯಿತು.
ಕಾಲೇಜಿನ ರಕ್ಷಣಾ ಹಾಗೂ ಸ್ವಚ್ಛತಾ ಸಿಬ್ಬಂದಿಗಳಾದ ಭಾಗ್ಯನಂದ ಎಂ.ಆರ್, ಸೀತಾರಾಮ ರಾವ್ ಕೆ, ಶಾರದಾ ಪಿ ಕೆ, ದಮಯಂತಿ ಕೆ, ಗೀತಾ ಎಂ ಆರ್, ಇವರನ್ನು ರೆಡ್ ಕ್ರಾಸ್ ವತಿಯಿಂದ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸಾಯಿಗೀತಾ ಜ್ಞಾನೇಶ್, ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲ್ ಮಾತನಾಡಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ , ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ. ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಉಪಸ್ಥಿತರಿದ್ದರು. ರೆಡ್ ಕ್ರಾಸ್ ಸದಸ್ಯರಾದ ಹವ್ಯಾ, ಭೂಮಿಕಾ ರೈ ಸಿ, ಧೃತಿ ಎಂ ಪ್ರಾರ್ಥಿಸಿ, ಸಿಂಚನ ಎನ್ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ, ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಿಂಚನ ಎ. ಪಿ ವಂದಿಸಿದರು. ಕಲ್ಪಿತ ಎಂ ಮತ್ತು ದೀಪ ಕೆ ಕಾರ್ಯಕ್ರಮ ನಿರೂಪಿಸಿದರು.











