ಸುಳ್ಯ:ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ 2026-27ನೇ ಸಾಲಿನ ಯುವ ರೆಡ್ಕ್ರಾಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆ, ಅಪರಾಧ ತಡೆ ಹಾಗೂ ಮಾದಕ ದ್ರವ್ಯಗಳ ದುರ್ಬಳಕೆ ಕುರಿತು
ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಯಿತು.ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಉದಯರವಿ ಎಂ.ವೈ. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ರಸ್ತೆ ಸುರಕ್ಷತೆ, ಸಂಚಾರ ನಿಯಮಗಳ ಪಾಲನೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಅನೇಕ ಅಪಘಾತಗಳನ್ನು ತಪ್ಪಿಸಬಹುದು. ವಿದ್ಯಾರ್ಥಿಗಳು ಅಪರಾಧ ಚಟುವಟಿಕೆಗಳಿಂದ ದೂರವಿದ್ದು, ಮಾದಕ ದ್ರವ್ಯಗಳ ದುಷ್ಪರಿಣಾಮಗಳನ್ನು ಅರಿತುಕೊಂಡು ತಮ್ಮ ಸ್ನೇಹಿತರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಕಾರ್ಯದರ್ಶಿ ಹೇಮನಾಥ ಕೆ.ವಿ. ಉದ್ಘಾಟಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಅತಿಥಿಯಾಗಿದ್ದರು.ಯುವ ರೆಡ್ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸುಳ್ಯ ಆರಕ್ಷಕ ಠಾಣೆಯ ಪ್ರೊಬೆಷನರಿ ಉಪನಿರೀಕ್ಷಕ ಕೃಷ್ಣ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀಧರ್ ವಿ. ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಭಿನಂದನ್, ಯುವ ರೆಡ್ಕ್ರಾಸ್ ಘಟಕದ ನಾಯಕರಾದ ಸೃಜನ್, ಸಿಂಚನ ಮೊದಲಾದವರು ಉಪಸ್ಥಿತರಿದ್ದರು.
ರೆಡ್ ಕ್ರಾಸ್ ಸದಸ್ಯರಾದ ಅನ್ಸೀಯ,ಸೌಪರ್ಣಿಕ, ಮೋನಿಷಾ, ನಯನಾ, ಕೃತಿ ಪ್ರಾರ್ಥಿಸಿದರು. ನಿತೀಶ್ ಸ್ವಾಗತಿಸಿ, ಲಿಯಾ ತಸ್ನೀಮ್ ವಂದಿಸಿದರು. ನಮ್ರತಾ ಮತ್ತು ಮೋನಿಷಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನಾ ಆಟಗಳನ್ನು ಏರ್ಪಡಿಸಲಾಯಿತು.








