ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಕಾಲೇಜಿನ ಆವರಣದಲ್ಲಿ ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಧ್ವಜಾರೋಹಣ ನೆರವೇರಿಸಿದರು.ವೇದಿಕೆಯಲ್ಲಿ ಕಾಲೇಜಿನ
ಶೈಕ್ಷಣಿಕ ಸಲಹೆಗಾರರು ಪ್ರೊ. ಬಾಲಚಂದ್ರ ಗೌಡ ಎಂ, ಪ್ರೊ. ಜವರೇ ಗೌಡ, ಪದವಿ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ಪದವಿ ಪೂರ್ವ ಪ್ರಾಂಶುಪಾಲೆ ಮಿಥಾಲಿ ರೈ, ಚಂದ್ರಶೇಖರ್ ಪೇರಾಲು ಮತ್ತು ಇನ್ನಿತರರು ಉಪಸ್ಥಿತರಿದ್ದರು. ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಎಲ್ಲಾ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು, ಕಾಲೇಜು ಎನ್ ಸಿ ಸಿ, ಎನ್ ಎಸ್ ಎಸ್, ರೇಂಜರ್ ಮತ್ತು ರೋವರ್ಸ್, ರೆಡ್ ಕ್ರಾಸ್ ವಿಭಾಗಗಳ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.









