ಸುಳ್ಯ; ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2023- 24ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆ. 26ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.ಸುಳ್ಯ ಜೂನಿಯರ್ ಕಾಲೇಜಿನ ವಿಜ್ಞಾನ ಶಿಕ್ಷಕಿ ಪ್ರಣವಿ ಎಂ ವೈಜ್ಞಾನಿಕವಾಗಿ ವಿಕ್ರಂ ಲ್ಯಾಂಡರ್ ರೋವರ್ ಚಲನೆಯ ಮಾದರಿ ಮೂಲಕ ವಿಜ್ಞಾನ ಸಂಘದ ಪರದೆಯನ್ನು ಸರಿಸಿ
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಆತ್ಮ ಜ್ಞಾನ ಹೆಚ್ಚಿಸಿಕೊಳ್ಳುವ ಜೊತೆಗೆ ಹೊಸತನ್ನು ಅನ್ವೇಷಿಸುವ ಯೋಚನೆಗಳನ್ನು ಮಾಡಬೇಕು ಎಂದರು.
ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ. ಬಾಲಚಂದ್ರ ಗೌಡ ಶುಭ ಹಾರೈಸಿಸರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಅಧ್ಯಕ್ಷತೆ ವಹಿಸಿದ್ದರು.

ವಿಜ್ಞಾನ ಸಂಘದ ಸದಸ್ಯರಾದ ಶಿಲ್ಪ ಮತ್ತು ತಂಡದವರು ಪ್ರಾರ್ಥಿಸಿ, ವಿಜ್ಞಾನ ಸಂಘದ ಅಧ್ಯಕ್ಷ ಚರಣ್ ಎಂ ಸ್ವಾಗತಿಸಿದರು. ವಿಜ್ಞಾನ ಸಂಘದ ಸಂಯೋಜಕರಾದ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಸತ್ಯಪ್ರಕಾಶ್ ದೇರಪ್ಪಜ್ಜನಮನೆ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಸಂಘದ ಖಜಾಂಜಿ ನಿಶ್ಮ ಡಿ ಸಿ ಉದ್ಘಾಟಕರನ್ನು ಪರಿಚಯಿಸಿ, ಕಾರ್ಯದರ್ಶಿ ಕೀರ್ತಿಕಾ ಟಿ ವಂದಿಸಿದರು. ಸಂಜಯ್ ಮತ್ತು ಯಶಿಕಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ
ವಿಜ್ಞಾನ ವಿಭಾಗಕ್ಕೆ ನೂತನ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಯಶಸ್ಸಿಗೆ ಉಪನ್ಯಾಸಕರಾದ ಉಷಾ ಎಂ ಪಿ, ಸಂಜೀವ ಕೆ, ಅಕ್ಷತಾ, ಕುಲದೀಪ್, ಅಶ್ವಿನಿ, ಕೃತಿಕಾ, ಹರ್ಷಕಿರಣ, ಅಜಿತ್ ಕುಮಾರ್ ಮತ್ತು ಪಲ್ಲವಿ ಹಾಗೂ ಸಿಬ್ಬಂದಿಗಳಾದ ಜಯಂತಿ, ಸೌಮ್ಯ, ಗೀತಾ, ಭವ್ಯ ಮತ್ತು ಶಿವಾನಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಸಹಕರಿಸಿದರು.