ಸುಳ್ಯ: ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಬೇಕು
ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು ಪ್ರೇರಣೆಯಾಗುವುದರ ಜೊತೆಗೆ ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘಟನೆಗಳು ಸಹಾಯಕ ಎಂದು ಲೇಖಕರು ಹಾಗೂ ಜಾನಪದ ಸಂಶೋಧಕರಾದ ಡಾ. ಸುಂದರ ಕೇನಾಜೆ ಹೇಳಿದರು. ಅವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ
ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಭೆಯಲ್ಲಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾತನಾಡಿ ಕಾಲೇಜಿನ ಸಮಗ್ರ ಅಭಿವೃದ್ಧಿಯನ್ನು ಬೆಳೆಸುವಲ್ಲಿ ವಿದ್ಯಾರ್ಥಿ ಸಂಘ ಬಹಳ ಮುಖ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ಕೆ ಟಿ ವಿಶ್ವನಾಥ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲಾನಾಧಿಕಾರಿ ರತ್ನಾವತಿ ಡಿ, ಆಂತರಿಕ ಗುಣಮಟ್ಟ ಖಾತರಿ ಕೋಶ ಸಂಯೋಜಕಿ ಡಾ. ಮಮತ ಕೆ, ಶಿಕ್ಷಕ ರಕ್ಷಕ ಸಂಘದ ಆಧ್ಯಕ್ಷರಾದ ಚಿನ್ನಪ್ಪ ಗೌಡ, ವಿದ್ಯಾರ್ಥಿ ಸಂಘದ ನಾಯಕ ಆದಿತ್ಯ ಡಿ ಕೆ, ಉಪನಾಯಕಿ ಗಾನ ಬಿಡಿ, ಕಾರ್ಯದರ್ಶಿ ಸೂರ್ಯದರ್ಶನ್ ಪಿ ಎ, ಜೊತೆ ಕಾರ್ಯದರ್ಶಿ ಉಜಾನ ಕೆ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ದಕ್ಷಯ್ ಡಿ ಎಸ್ ಹಾಗೂ ಅಂಬಿಕಾ ಎಂ, ಹಾಗೂ ಕ್ರೀಡಾ ಕಾರ್ಯದರ್ಶಿಗಳಾದ ಶಶಾಂಕ್ ಪಿ ವಿ ಹಾಗೂ ತೃಪ್ತಿ ಪಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲಾನಾಧಿಕಾರಿ ರತ್ನಾವತಿ ಡಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಭೋದಿಸಿದರು. ಬಳಿಕ ಅರ್ಹ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ವಿದ್ಯಾರ್ಥಿನಿ ಶ್ರೀಲಯ ಪ್ರಾರ್ಥಿಸಿ, ಆದಿತ್ಯ ಡಿ ಕೆ ಸ್ವಾಗತಿಸಿದರು. ಅನ್ವಯ ಅಂತಿಮ ಬಿ.ಕಾಂ ಹಾಗೂ ಅಕ್ಷತಾ ಸಿ ದ್ವಿತೀಯ ಬಿ.ಎಸ್ಸಿ ಕಾರ್ಯಕ್ರಮ ನಿರೂಪಿಸಿದರು. ಸೂರ್ಯದರ್ಶನ್ ಪಿ ಎ ವಂದಿಸಿದರು.
ಕಾರ್ಯಕ್ರಮದಲ್ಲಿ ಭೋದಕ ಭೋದಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.