ಸುಳ್ಯ:ಹೆತ್ತ ತಾಯಿ, ಹೊತ್ತ ಭೂಮಿ, ವಿದ್ಯೆ ಕಲಿಸಿದ ಗುರುಗಳನ್ನು ಗೌರವದಿಂದ ಕಂಡರೆ ಬದುಕಿನಲ್ಲಿ ಯಶಸ್ಸು ಖಂಡಿತ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಹೇಳಿದರು. ಅವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ
ಶಿಕ್ಷಕ ದಿನಾಚರಣೆ ಕಾರ್ಯಕ್ರಮದ ದಿಕ್ಸೂಚಿ ಭಾಷಣ ಮಾಡಿದರು.
ಕಾಲೇಜಿನ ಗೌರವ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ. ಬಾಲಚಂದ್ರ ಗೌಡ ಅತಿಥಿಯಾಗಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಅಧ್ಯಕ್ಷತೆ ವಹಿಸಿದದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ನ್ಯಾಕ್ ಸಂಯೋಜಕಿ ಡಾ. ಮಮತಾ ಕೆ ಉಪಸ್ಥಿತರಿದ್ದರು.
ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಅಭಿಜ್ಞಾ ಪ್ರಾರ್ಥಿಸಿ, ಸಾನಿಧ್ಯ ಸ್ವಾಗತಿಸಿ, ಕಾಲೇಜು ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಉಜಾನ ವಂದಿಸಿದರು. ಕೌಶಿಕ್ ಮತ್ತು ಚೈತ್ರಾ ಕಾರ್ಯಕ್ರಮ ನಿರೂಪಿಸಿದರು.
ಪ್ರಾಪ್ತಿ ಶಿಕ್ಷಕರ ಸ್ವ ರಚಿತ ಕವನವನ್ನು ವಾಚಿಸಿದರು.
ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.