ಸುಳ್ಯ: ನಮ್ಮಲ್ಲಿ ತಾಳ್ಮೆ, ನೈತಿಕ ಮೌಲ್ಯಗಳು ಇದ್ದಷ್ಟು ಸಾಧಿಸುವ ಶಕ್ತಿ ಹೆಚ್ಚುತ್ತದೆ. ಜೀವನದ ಅನುಭವಗಳನ್ನು ಯಶಸ್ಸನ್ನು ಗಳಿಸಲು ಮಾರ್ಗದರ್ಶಿಯಾಗಿ ಬಳಸಿಕೊಳ್ಳಬೇಕು. ಒಬ್ಬ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಕಾಲೇಜು ಮತ್ತು ಉಪನ್ಯಾಸಕರು ಪ್ರಾಮುಖ್ಯ. ಎಂದು ಚಿಂತಕರು ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಡಾಜೆ, ಬೆಳ್ತಂಗಡಿ ಇಲ್ಲಿನ ಅಧ್ಯಾಪಕ ಅರವಿಂದ ಚೊಕ್ಕಾಡಿ ಹೇಳಿದರು. ಇವರು ಮೇ 31ರಂದು ನೆಹರೂ ಮೆಮೋರಿಯಲ್ ಪದವಿ ಕಾಲೇಜಿನ
ವಾರ್ಷಿಕ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಭಾ ಕಾರ್ಯಕ್ರಮವನ್ನು ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷರಾಗಿರುವ ಡಾ. ಕೆ. ವಿ. ಚಿದಾನಂದರು ಸಂಸ್ಥೆ ನೀಡುತ್ತಿರುವ ಅತ್ಯುತ್ತಮ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಸಾಧನೆಗಳನ್ನು ಮಾಡಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾಲೇಜಿನ ಪ್ರಾಂಶಪಾಲರಾದ ಡಾ. ರುದ್ರಕುಮಾರ್ ವಾರ್ಷಿಕ ವರದಿಯನ್ನು ವಾಚಿಸಿದರು.
ವೇದಿಕೆಯಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಬಾಲಚಂದ್ರ ಗೌಡ, ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಧನಂಜಯ ಮದುವೆಗದ್ದೆ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಿನ್ನಪ್ಪ ಗೌಡ, ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ದತ್ತಿನಿಧಿ ಪುರಸ್ಕಾರ ವಿತರಣೆ ನಡೆಯಿತು.
ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೋಸ್ಬಿನ್ ಬಾಬು ಸ್ವಾಗತಿಸಿ, ಸಹ ಕಾರ್ಯದರ್ಶಿ ಯಶಿಕಾ ಉದ್ಘಾಟಕರನ್ನು ಪರಿಚಯಿಸಿ, ಕಾರ್ಯದರ್ಶಿ ಕೃಷ್ಣರಾಜ್ ಸಂದೇಶ ವಾಚಿಸಿದರು. ಉಪಾಧ್ಯಕ್ಷೆ ನಿರೀಕ್ಷಾ ವಂದಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಮಧುರಾ ಎಂ ಆರ್, ಸಾಂಸ್ಕೃತಿಕ ಕಾರ್ಯದರ್ಶಿ ಕುಸುಮಾಧರ ಎ ಟಿ, ಸದಸ್ಯರಾದ ಮಂಜುಶ್ರೀ, ಹರ್ಷಿತ್ ಮರ್ಕಂಜ, ಜಯಪ್ರಕಾಶ್ ಪೆರುಮುಂಡ, ಹೇಮಂತ್ ನಾರ್ಕೋಡು ತಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಹಾಗೆಯೇ ಕಾಲೇಜಿನ ವಿದ್ಯಾರ್ಥಿಗಳಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.









