ಸುಳ್ಯ: ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಟಿ ಉತ್ಸವ ಕಾರ್ಯಕ್ರಮ ನಡೆಯಿತು.ಚೆನ್ನಮಣೆ ಆಡುವುದರ ಮೂಲಕ ಕಾರ್ಯಕ್ರಮವನ್ನು ಎ ಓ ಎಲ್ ಇಯ ಸದಸ್ಯರಾದ ಜಗದೀಶ್ ಅಡ್ತಲೆ ಉದ್ಘಾಟಿಸಿದರು. ಕಾಲೇಜಿನ ಪ್ರಾಚಾರ್ಯರಾದ ಹರಿಣಿ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು.ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ
ರೇಷ್ಮಾ ಎಂ ಎಂ, ಹರೀಶ ಸಿ ಹಾಗೂ ಉಪನ್ಯಾಸಕ ವೃಂದದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಕಾಡೆಮಿ ಆಫ ಲಿಬರಲ್ ಎಜ್ಯುಕೇಷನ್ನ ಉಪಾಧ್ಯಕ್ಷೆ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ., ಕಾರ್ಯದರ್ಶಿ ಡಾ. ಐಶ್ವರ್ಯ ಕೆ.ಸಿ.ಎನ್ನೆoಸಿ ಪ್ರಾoಶುಪಾಲ ಪ್ರೊ ರುದ್ರ ಕುಮಾರ್ ಎಂ ಎಂ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಉದ್ಯೋಗಿ ರಜತ್ ಅಡ್ಕಾರ್ ಅವರು ಆಗಮಿಸಿ ಆಟಿ ಉತ್ಸವದ ವಸ್ತು ಪ್ರದರ್ಶನದಲ್ಲಿ ಹಿಂದಿನ ಕಾಲದ ಉಪಕರಣಗಳು,ನೃತ್ಯ,ಹಾಡು ,ಆಹಾರ ವೈವಿಧ್ಯ ಮೊದಲಾದ ಕಲಾ ಪ್ರಕಾರಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ವಿದ್ಯಾರ್ಥಿಗಳನ್ನು 4ತಂಡಗಳನ್ನಾಗಿ ಮಾಡಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ವಿದ್ಯಾರ್ಥಿನಿ ಅಭಿಜ್ಞಾ ಎನ್ ಎಂ ಪ್ರಾರ್ಥಿಸಿ, ವಿ. ಕ್ಷೇಮಾಧಿಕಾರಿಗಳಾದ ರೇಷ್ಮಾ ಎಂ ಎಂ ಸ್ವಾಗತಿಸಿ,ಹರೀಶ ಸಿ ವಂದಿಸಿದರು. ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ. ಕಾರ್ಯಕ್ರಮ ನಿರೂಪಿಸಿದರು.