ಸುಳ್ಯ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮಂಗಳೂರಿನ ಶಕ್ತಿ ಪ.ಪೂ ಕಾಲೇಜಿನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಿದ್ದ ಸುಳ್ಯ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಹುಡುಗರ ತಂಡ ರನ್ನರ್ಸ್ ಆಗಿ ಹೊರ ಹೊಮ್ಮಿದ್ದಾರೆ.ಇವರಿಗೆ ಕ್ರೀಡಾ ತರಬೇತುದಾರರಾದ ನಾಗರಾಜ್ ನಾಯ್ಕ್ ಭಟ್ಕಳ ತರಬೇತಿ ನೀಡಿದ್ದರು. ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.











