ಮಂಗಳೂರು:ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೇ ದಿನವಾದ ಏಪ್ರಿಲ್ 18ರ ಮಂಗಳವಾರ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ 15 ಅಭ್ಯರ್ಥಿಗಳು 17 ನಾಮಪತ್ರವನ್ನು ಸಲ್ಲಿಸಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಭಾಗಿರಥಿ ಮುರುಳ್ಯ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ಎರಡು ಸೆಟ್ ನಾಮಪತ್ರ ಹಾಗೂ
ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ. ಸುಮುನಾ ಬೆಳ್ಳಾರ್ಕರ್ ಅವರು ಉಮೇದುವಾರಿಕೆ ಸಲ್ಲಿಸಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಅಕ್ಬರ್, ತುಳುವೆರೆ ಪಕ್ಷದ ಅಭ್ಯರ್ಥಿಯಾಗಿ ಶೈಲೇಶ್ ಆರ್.ಜೆ ಹಾಗೂ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ನವಾಜ್ ಶರೀಫ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಮೂಡುಬಿದರೆ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ದುರ್ಗಾ ಪ್ರಸಾದ್, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಉಮನಾಥ್ ಕೋಟ್ಯಾನ್ ಹಾಗೂ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಅಲ್ಫಾನ್ಸೋ ಫ್ರಾಂಕೋ ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ಅಭ್ಯರ್ಥಿಯಾಗಿ ಧರ್ಮೇಂದ್ರ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಡಾ. ಭರತ್ ಶೆಟ್ಟಿ, ಪಕ್ಷೇತರ ಅಭ್ಯರ್ಥಿಯಾಗಿ ಮ್ಯಾಕ್ಸಿಮ್ ಪಿಂಟೊ ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಆಮ್ ಆದ್ಮಿ ಪಕ್ಷದಿಂದ ಸಂತೋಷ್ ಕಾಮತ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಹಮ್ಮದ್ ಅಶ್ರಫ್ ಕಲ್ಲೇಗ ನಾಮಪತ್ರ ಸಲ್ಲಿಸಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.
ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆ ದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಮೇ 10 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದ್ದಾರೆ.