ಮಂಗಳೂರು: ನಾಮಪತ್ರಗಳ ಸಲ್ಲಿಕೆಯ ನಾಲ್ಕನೇ ದಿನವಾದ ಏ.2ರ ಮಂಗಳವಾರ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ದೀಪಕ್ ರಾಜೇಶ್ ಕುವೆಲ್ಲೊ ಹಾಗೂ ಉತ್ತಮ ಪ್ರಜಾಕೀಯ ಪಕ್ಷದಿಂದ ಕೆ.ಇ. ಮನೋಹರ ಅವರ ನಾಮಪತ್ರ ಸಲ್ಲಿಕೆಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.