ಮಂಗಳೂರು:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸುಳ್ಯದ ಸತೀಶ್ ಬೂಡುಮಕ್ಕಿ ನಾಮಪತ್ರ ಹಿಂಪಡೆದಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಎ.8ರಂದು ಅವರು ನಗರದ ಜಿಲ್ಲಾ ಚುನಾವಣಾಧಿಕಾರಿಗಳ
ಕಚೇರಿಯಲ್ಲಿ ನಾಮಪತ್ರ ಹಿಂಪಡೆದಿದ್ದಾರೆ. ಸುಳ್ಯ ಅಜ್ಜಾವರ ಗ್ರಾಮದ ಮುಳ್ಯದವರಾದ ಸತೀಶ್ ಬೂಡುಮಕ್ಕಿ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಸುಳ್ಯ ತಾಲೂಕು ಅಧ್ಯಕ್ಷ ಹಾಗು ಜನ ಅಭಿವೃದ್ಧಿ ವೇದಿಕೆಯ ತಾಲೂಕು ಅಧ್ಯಕ್ಷರಾಗಿದ್ದಾರೆ. ಸಂಘಟನೆಯ ಹಿರಿಯರ ಸೂಚನೆಯ ಮೇರೆಗೆ ನಾಮಪತ್ರ ಹಿಂಪಡೆಯಲಾಗಿದ್ದು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಸತೀಶ್ ಬೂಡುಮಕ್ಕಿ ತಿಳಿಸಿದ್ದಾರೆ.