ಬೆಂಗಳೂರು: ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ
ಗ್ರೂಪ್ ಸಿ ಹುದ್ದೆ ನೀಡಿದ್ದಕ್ಕೆ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಅವರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಸಿಎಂ
ಅಧಿಕೃತ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು. ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿ, ಸರ್ಕಾರವು ಗುತ್ತಿಗೆ ಆಧಾರದಲ್ಲಿ ನೂತನ ಅವರನ್ನು ನೇಮಕಾತಿ ಮಾಡಿ ಆದೇಶ ಹೊರಡಿಸಿತ್ತು.