ಸುಳ್ಯ:ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪಗೊಂಡಿತು. ಆಲೆಟ್ಟಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದ
ಅಧ್ಯಕ್ಷತೆಯನ್ನುಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ನ ಕಾರ್ಯದರ್ಶಿ ಹೇಮನಾಥ ಕೆ.ವಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಆಲೆಟ್ಟಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಪಾಶಂಕರ ತುದಿಯಡ್ಕ, ರೋಟರಿ ಕ್ಲಬ್ ಸಿಟಿ ಸುಳ್ಯದ ಅಧ್ಯಕ್ಷ ಹೇಮಂತ್ ಕಾಮತ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ ವಿನಯ್ ಶಂಕರ್ ಭಾರಧ್ವಾಜ್ ಹಾಗೂ ಎನ್ ಎಸ್ ಎಸ್ ಘಟಕದ ನಾಯಕರಾದ ಸ್ಪಂದ ಹಾಗೂ ರೋಹನ್ ಎಲ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಶಿಬಿರದ ತಂಡಗಳಿಗೆ ಪ್ರಶಸ್ತಿಯನ್ನು ನೀಡಲಾಯಿತು. ಕಾಲೇಜಿನ ಸಂಹಿತ ಸಿದ್ಧಾಂತ ವಿಭಾಗದ ಪ್ರಾಧ್ಯಾಪಕಿಯಾದ ಡಾ. ದೇವಿಕಾ ಶೆಟ್ಟಿ ಹಾಗೂ ಬಳಗದವರು ಪ್ರಾರ್ಥಿಸಿ, ಶಿಬಿರಾರ್ಥಿಗಳಾದ ಐಶ್ವರ್ಯ ಸುಭಾಷ್ ರಾಯ್ಕರ್ ಸ್ವಾಗತಿಸಿ, ಅನುಪ್ರಿಯ ಆರ್ ಹಾಗೂ ಚಂದನ್ ಕೆ ಎಲ್ ಕಾರ್ಯಕ್ರಮವನ್ನು ನಿರೂಪಿಸಿ, ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಯೋಜನಾಧಿಕಾರಿ ಡಾ. ಪ್ರಮೋದ ಪಿ ಎ ವಂದಿಸಿದರು.















