ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಮರ್ಕಂಜ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥನ ರೆಂಜಾಳದ ವಿನಾಯಕ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ವಹಿಸಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ ವಿ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಅಕಾಡಮಿ ಆಫ್ ಲಿಬರಲ್ ಎಜುಕೇಷನ್ನ ಉಪಾಧ್ಯಕ್ಷೆ ಶೋಭಾ ಚಿದಾನಂದ, ಶ್ರೀ ಕ್ಷೇತ್ರ ರೆಂಜಾಳದ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ರಾಘವ ಕಂಜಿಪಿಲಿ, ನಿಕಟಪೂರ್ವ ಸದಸ್ಯರಾದ ರಾಜೇಶ್ವರಿ ಕುಮಾರಸ್ವಾಮಿ ಹಾಗೂ ಅನ್ನಪೂರ್ಣ ಸಮಿತಿಯ ಅಧ್ಯಕ್ಷ ಚಿನ್ನಪ್ಪ ಗೌಡ ಬೇರಿಕೆ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಶ್ರೀ ಕ್ಷೇತ್ರ ರೆಂಜಾಳದ ಸೇವಾ ಸಮಿತಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಬಾಣೂರು, ಉಪಾಧ್ಯಕ್ಷ ಜಗನ್ಮೋಹನ್ ರೈ ಹೈದಂಗೂರು, ಕಾರ್ಯದರ್ಶಿ ಸತೀಶ್ ರಾವ್ ದಾಸರಬೈಲು ಚೆನ್ನಕೇಶವ ದೋಳ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ, ಕಾಲೇಜಿನ ಶೈಕ್ಷಣಿಕ ಮುಖ್ಯಸ್ಥರಾದ ಡಾ. ಕವಿತಾ ಬಿ ಎಂ, ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಯೋಜನಾಧಿಕಾರಿಯಾದ ಡಾ. ಪ್ರಮೋದ ಪಿ ಎ, ಎನ್ ಎಸ್ ಎಸ್ ಘಟಕದ ನಾಯಕರಾದ ಚೇತನ ಎಂ ಹಾಗೂ ವಿಶ್ವಾಸ್ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಶಿಬಿರದ ತಂಡಗಳಿಗೆ ಪ್ರಶಸ್ತಿಯನ್ನು ನೀಡಲಾಯಿತು. ಶಿಭಿರಾರ್ಥಿ ಕಾವ್ಯ ಪ್ರಾರ್ಥಿಸಿ, ವೈಷ್ಣವಿ ಎನ್ ಎಂ ಸ್ವಾಗತಿಸಿ, ಡಾ. ಪ್ರಮೋದ ಪಿ ಎ ವಂದಿಸಿದರು. ಅಮೂಲ್ಯ ಸಿ ಹಾಗೂ ಸಂಪತ್ ಕಾರ್ಯಕ್ರಮ ನಿರೂಪಿಸಿದರು.