ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ದ ಎಸ್ ಎಸ್ ಪಿ ಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ ಬಳ್ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಿಬಿರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ
ಸೋಮಶೇಖರ ನಾಯಕ್, ಬಳ್ಪ ಗ್ರಾ.ಪಂ ಅಧ್ಯಕ್ಷೆ ಶಶಿಕಲಾ ಸೂಂತಾರು, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಿವರಾಮ ರೈ, ಬಳ್ಪ ಸರಕಾರಿ ಶಾಲಾ ಮುಖ್ಯಗುರು ಗಿರಿಜಾ,
ಬಳ್ಪ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಉಮೇಶ್ ಬುಡೆಂಗಿ, ವರ್ತಕರ ಸಂಘದ ಅಧ್ಯಕ್ಷ ಹಸೈನರ್ ಬಳ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವೀಚಾರಕಿ ಪ್ರೀಯ ಎನ್ ಮುಖ್ಯ ಅತಿಥಿಗಳಾಗಿದ್ದರು. ಎನ್ ಎಸ್ ಎಸ್ ಯೋಜನಾಧಿಕಾರಿ ಸೌಮ್ಯಾ ದಿನೇಶ್,ಸಹಯೋಜನಾಧಿಕಾರಿ ಪ್ರವೀಣ್ ಎ, ಘಟಕದ ನಾಯಕ ಪ್ರೀತಂ, ನಾಯಕಿ ಭಾಮಿಕ ವೇದಿಕೆಯಲ್ಲಿದ್ದರು.