ಪೆರುವಾಜೆ:ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದಲ್ಲಿ ನಡೆದ 2023-24 ನೇ ಸಾಲಿನ ಎನ್.ಎಸ್.ಎಸ್ ರಾಷ್ಟ್ರೀಯ ಐಕ್ಯತಾ ಶಿಬಿರದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿದ್ದ ಬೆಳ್ಳಾರೆಯ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ
ಪ್ರಥಮ ಬಿಕಾಂ ವಿದ್ಯಾರ್ಥಿನಿ ಶ್ರಾವ್ಯ ಜಿ.ಪಿ ಏಕವ್ಯಕ್ತಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ಹಾಗೂ ಇವರು ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಗುಂಪು ನೃತ್ಯಕ್ಕೆ ತೃತೀಯ ಸ್ಥಾನ ಲಭಿಸಿದೆ.ಇವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಎನ್.ಎಸ್.ಎಸ್. ಘಟಕ ಮತ್ತು ಎಲ್ಲಾ ಅಧ್ಯಾಪಕರು ಹೃತ್ಪೂರ್ವಕವಾಗಿ ಅಭಿನಂದನೆ ಸಲ್ಲಿಸಿದ್ದಾರೆ.