ಸುಳ್ಯ:ಸಮಾಜಮುಖಿಯಾಗಿ ಬೆಳೆಯಲು, ಸೇವಾ ಮನೋಭಾವವನ್ನು ಬೆಳೆಸಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಪ್ರೇರಣೆಯನ್ನು ನೀಡುತ್ತದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಸುಳ್ಯದ ಕೆ.ವಿ.ಜಿ. ಪಾಲಿಟೆಕ್ನಿಕ್ ಕಾಲೇಜಿನ ಎನ್.ಎಸ್.ಎಸ್. ಹಿರಿಯ ವಿದ್ಯಾರ್ಥಿಗಳ ಸಂಘ ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ ಹಾಗೂ ವಳಲಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವ
ಮತ್ತು ಸೇವಾ ಸಮ್ಮಿಲನದ ಅಂಗವಾಗಿ ವಳಲಂಬೆಯಲ್ಲಿ ನಡೆದ
ರಾಜ್ಯಮಟ್ಟದ ಜನಪದ ರೂಪಕಗಳ ಸ್ಪರ್ಧೆ ‘ಜನಪದ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಎನ್.ಎಸ್.ಎಸ್. ಸೇವಾ ಸಂಗಮ ಟ್ರಸ್ಟ್ನ ದಶಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾಯಕತ್ವ ಗುಣವನ್ನು ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ನಾಯಕನಾಗಿ ಬೆಳೆಯಲು ಎನ್.ಎಸ್.ಎಸ್. ಪೂರಕ ಎಂದು ಅವರು ಹೇಳಿದರು. ಟ್ರಸ್ಟ್ನ ದಶಮಾನೋತ್ಸವ ಸಂಚಿಕೆಯನ್ನು ಸಾಂಕೇತಿಕವಾಗಿ ಶಾಸಕರು ಬಿಡುಗಡೆ ಮಾಡಿದರು.

ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವಿಶ್ವನಾಥ ಬದಿಕಾನ ಪ್ರಧಾನ ಭಾಷಣ ಮಾಡಿದರು.
ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ನ ಗೌರವಾಧ್ಯಕ್ಷ ಬಾಲಕೃಷ್ಣ ಗೌಡ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ,
ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ, ರೇವತಿ ಆಚಳ್ಳಿ, ಉದ್ಯಮಿ ಉಮೇಶ್ ಮುಂಡೋಡಿ, ರಾಜ್ಯ ಯುವ ಒಕ್ಕೂಟದ ಸದಸ್ಯ ಶಿವಪ್ರಕಾಶ್ ಕಡಪಳ, ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ನ ಗೌರವ ಸಲಹೆಗಾರರಾದ ಚಂದ್ರಶೇಖರ ಬಿಳಿನೆಲೆ, ಸಲಹಾ ಸಮಿತಿ ಸದಸ್ಯೆ ಡಾ.ಅನುರಾಧಾ ಕುರುಂಜಿ, ವಳಲಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಪ್ರಮೀಳ ಪಿ.ಎಸ್., ಎಸ್ಡಿಎಂಸಿ ಅಧ್ಯಕ್ಷ ರವೀಶ್ ಕುಮಾರ್ ಮೊಟ್ಟೆಮನೆ, ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಪಿ., ಅಂಗನವಾಡಿ ಕಾರ್ಯಕರ್ತೆ ಚಂದ್ರಾವತಿ ಉಪಸ್ಥಿತರಿದ್ದರು.

ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ನ ಅಧ್ಯಕ್ಷ ವಿಜೇತ್ ಶಿರ್ಲಾಲ್, ಕಾರ್ಯಾಧ್ಯಕ್ಷ ರಕ್ಷಿತ್ ಬೊಳ್ಳೂರು, ಪ್ರಧಾನ ಕಾರ್ಯದರ್ಶಿ ವಿಶ್ವಕಿರಣ್ ಎಸ್.ಜಿ, ಖಜಾಂಚಿ ಹೇಮನಾಥ ಜಯನಗರ, ರಜನೀಶ್ ಗುಡ್ಡೆಮನೆ, ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ.ಎಸ್, ಕಾರ್ಯದರ್ಶಿಗಳಾದ ಸುಶಾಂತ್ ಅಜ್ಜಿಕಲ್ಲು, ಸೌಜನ್ಯ ಕುತ್ಯಾಳ ಉಪಸ್ಥಿತರಿದ್ದರು. ಅಧ್ಯಕ್ಷ ವಿಜೇತ್ ಶಿರ್ಲಾಲ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜನಪದ ವೈಭವ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಜನಪದ ತಂಡಗಳು ಆಕರ್ಷಕ ಜನಪದ ನೃತ್ಯ ರೂಪಕಗಳನ್ನು ಪ್ರಸ್ತುತ ಪಡಿಸಿದರು. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.










