ಸುಳ್ಯ: ಎನ್ಎಸ್ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕಗೊಂಡಿದ್ದಾರೆ.ಸವಾದ್ ಸುಳ್ಯ ನಗರದ ಗಾಂಧಿನಗರದವರು.
ಸವಾದ್ ಸುಳ್ಯ ಎನ್ಎಸ್ಯು ದ.ಕ.ಜಿಲ್ಲಾ ಅಧ್ಯಕ್ಷರಾಗಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ, ಸರ್ವ ಕಾಲೇಜು ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ, ಎನ್ಎಸ್ಯುಐ ರಾಜ್ಯ ಕಾರ್ಯದರ್ಶಿಯಾಗಿ ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸಂಚಾಲಕರಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೇ.31ರಂದು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವುದಾಗಿ ಸವಾದ್ ತಿಳಿಸಿದ್ದಾರೆ.