ಜೋಹನಸ್ಬರ್ಗ್: ಪಾದಾರ್ಪಣೆ ಪಂದ್ಯದಲ್ಲಿಯೇ ಅರ್ಧ ಶತಕ ಸಿಡಿಸಿದ ಸಾಯ್ ಸುದರ್ಶನ್ ಹಾಗೂ ಶ್ರೇಯಸ್ ಅಯ್ಯರ್ ಆಕರ್ಷಕ ಅರ್ಧ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ಭಾರತದ ವಿರುದ್ಧ ಆರಂಭಗೊಂಡ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ದಕ್ಷಿಣ ಆಫ್ರಿಕಾ ನೀಡಿದ 117 ರನ್ ಗುರಿಯನ್ನು
16.4 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಮುಟ್ಟಿದ ಟೀಂ ಇಂಡಿಯಾ ಗೆಲುವಿನ ನಗೆ ಬೀರಿತು. 3 ಪಂದ್ಯಗಳ ಸರಣಿಯಲ್ಲಿ1-0 ಅನಂತರದ ಮುನ್ನಡೆ ಸಾಧಿಸಿತು. ತನ್ನ ಮೊದಲ ಅಂತಾರಾಷ್ಟ್ರೀಯ ಎಕದಿನ ಪಂದ್ಯ ಆಡಿದ ಸಾಯ್ ಸುದರ್ಶನ್ ಅರ್ಧ ಶತಕ ಸಿಡಿಸಿ ಮಿಂಚಿದರು. ಆರಂಭಿಕರಾಗಿ ಬ್ಯಾಟ್ ಬೀಸಿದ ಸುದರ್ಶನ್ 43 ಎಸೆತಗಳಲ್ಲಿ 9 ಬೌಂಡರಿ ನೆರವಿನಿಂದ ಅಜೇಯ 55 ರನ್ ಬಾರಿಸಿದರು. ಶ್ರೇಯಸ್ ಅಯ್ಯರ್ 45 ಎಸೆತಗಳಲ್ಲಿ 6 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 52 ರನ್ ಗಳಿಸಿದರು.
ಇದಕ್ಕೂ ಮುನ್ನಭಾರತದ ವೇಗದ ಬೌಲರ್ಗಳಾದ ಅರ್ಶದೀಪ್ ಸಿಂಗ್ ಹಾಗೂ ಆವೇಶ್ ಖಾನ್ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ 27.3 ಓವರ್ಗಳಲ್ಲಿ 116 ರನ್ಗಳಿಗೆ ಆಲ್ ಔಟ್ ಆಯಿತು. ಭಾರತದ ಪರ ಅರ್ಶದೀಪ್ ಸಿಂಗ್ 37 ರನ್ ನೀಡಿ 5 ವಿಕೆಟ್ ಪಡೆದರೆ ಆವೇಶ್ ಖಾನ್ 27 ರನ್ ನೀಡಿ 4 ವಿಕೆಟ್ ಉರುಳಿಸಿದರು. ಕುಲ್ದೀಪ್ ಯಾದವ್ ಒಂದು ವಿಕೆಟ್ ಉರುಳಿಸಿದರು. 33 ರನ್ ಗಳಿಸಿದ ಆಂಡ್ರೂ ಫೆಲುಕುವಾಯೋ ದಕ್ಷಿಣ ಆಫ್ರಿಕಾದ ಟಾಪ್ ಸ್ಕೋರರ್ ಆದರು.ಟೋನಿ ಡಿ ಜಾರ್ಜಿ 28 ರನ್ ಗಳಿಸಿದರು














