ಬರ್ಮಿಂಗ್ಹ್ಯಾಮ್: ಇಂಗ್ಲೆಂಡ್ ಎದುರಿನ ಏಕದಿನ ಕ್ರಿಕೆಟ್ ಸರಣಿಯಲ್ಲಿ ಆಡುವ ಭಾರತ ತಂಡದಿಂದ ವೇಗದ ಬೌಲರ್ ಹರ್ಷಿತ್ ರಾಣಾ ಮತ್ತು ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಕೈಬಿಡಲಾಗಿದೆ. ಸ್ನಾಯುಸೆಳೆತದ ಗಾಯ ದಿಂದ ಬಳಲುತ್ತಿರುವ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರಿಬ್ಬರ ಬದಲಿಗೆ
ವೇಗಿ ಪ್ರಿನ್ಸ್ ಯಾದವ್ ಮತ್ತು ಸ್ಪಿನ್ನರ್ ರವಿ ಬಿಷ್ಣೋಯಿಗೆ ಸ್ಥಾನ ನೀಡಲಾಗಿದೆ.ಸ್ಥಾನದಲ್ಲಿ ಆಡುವರು. ಬಿಷ್ಣೋಯಿ ಅವರನ್ನು ಜಿಂಬಾಬ್ವೆ ಎದುರಿನ ಟಿ20 ಸರಣಿಯಲ್ಲಿ ಆಡುವ ತಂಡಕ್ಕೂ ಆಯ್ಕೆ ಮಾಡಲಾಗಿದೆ.
ಏಕದಿನ ಸರಣಿಯಲ್ಲಿ ಆಡುವ ತಂಡವನ್ನು ಶುಭಮನ್ ಗಿಲ್ ಮುನ್ನಡೆಸುವರು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡ ದಲ್ಲಿದ್ದಾರೆ. ಕನ್ನಡಿಗ ಕೆ.ಎಲ್. ರಾಹುಲ್ ಕೂಡ ಕಣಕ್ಕಿಳಿಯಲಿದ್ದಾರೆ.
ತಂಡಗಳು: ಇಂಗ್ಲೆಂಡ್ ಎದುರಿನ ಏಕದಿನ ಸರಣಿ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ಕುಲದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಪ್ರಸಿದ್ಧಕೃಷ್ಣ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್.
ಜಿಂಬಾಬ್ವೆ ಎದುರಿನ ಟಿ20 ಸರಣಿ: ಶ್ರೇಯಸ್ ಅಯ್ಯರ್ (ನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ಕೀಪರ್), ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ ದುಬೆ, ಪ್ರಿನ್ಸ್ ಯಾದವ್, ಯಶ್ ಠಾಕೂರ್, ಅಶೋಕ್ ಶರ್ಮಾ, ಮಯಂಕ್ ಯಾದವ್, ಪ್ರಭಸಿಮ್ರನ್ ಸಿಂಗ್ (ವಿಕೆಟ್ಕೀಪರ್), ರವಿ ಬಿಷ್ಣೋಯಿ.






