ಬಾಲಸೋರ್:ಯಶವಂತಪುರ–ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್– ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರೈಲು ಅವಘಡದಲ್ಲಿ 233 ಪ್ರಯಾಣಿಕರು ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಈ ಭೀಕರ ದುರಂತ ನಡೆದ ಸ್ಥಳದಲ್ಲಿ ಭಾರಿ ಪ್ರಮಾಣದ ಪರಿಹಾರ
ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿರಕ್ಕೂ ಹೆಚ್ಚು ಸಿಬ್ಬಂದಿ ತೊಡಗಿಕೊಂಡಿದ್ದಾರೆ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ಅವರು ಈ ದುರಂತ ಸ್ಥಳಕ್ಕೆ ಆಗಮಿಸಿದ್ದಾರೆ. ಘಟಬೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ರೈಲ್ವೇ ಸಚಿವರು ಘೋಷಿಸಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಮತ್ತು ಸಣ್ಣ ಪುಟ್ಟ ಗಾಯಗಳಾದವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಇಲಾಖೆ ಈಗಾಗಲೇ ಘೋಷಿಸಿದೆ” ಎಂದು ಅಶ್ವಿನಿ ವೈಷ್ಣವ್ ವಿವರಿಸಿದ್ದಾರೆ. ದುರಂತದಲ್ಲಿ 233 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ದೃಢಪಡಿಸಿದ್ದಾರೆ. ಶುಕ್ರವಾರ ಮುಸ್ಸಂಜೆ ವೇಳೆಗೆ ನಡೆದ ಘಟನೆಯಲ್ಲಿ 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವಿವರಿಸಿದ್ದಾರೆ. ಘಟನೆಯಿಂದ 43ಕ್ಕೂ ಹೆಚ್ಚು ರೈಲುಗಳು ರದ್ದುಗೊಂಡಿದೆ.