ಭುವನೇಶ್ವರ: ಮೋಹನ್ ಚರಣ್ ಮಾಝಿ ಅವರು ಒಡಿಶಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಭುವನೇಶ್ವರದ ಜನತಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮೋಹನ್ ಚರಣ್ ಮಾಝಿ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಗಳಾಗಿ ಕೆ.ವಿ.ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಪ್ರಮಾಣವಚನ ಸ್ವೀಕರಿಸಿದ್ದಾರೆ.ಸಮಾರಂಭದಲ್ಲಿ
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಒಡಿಶಾದ ಮಾಜಿ ಸಿಎಂ ನವೀನ್ ಪಟ್ನಾಯಕ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಗಣ್ಯರು ಭಾಗವಹಿಸಿದ್ದರು.147 ಸದಸ್ಯ ಬಲದ ವಿಧಾನಸಭೆಗೆ ಈಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗಳಿಸಿ ಸ್ಪಷ್ಟ ಬಹುಮತ ಪಡೆದರೆ, ಅಧಿಕಾರ ಕಳೆದುಕೊಂಡ ಬಿಜೆಡಿ 51 ಸ್ಥಾನಗಳಿಸಿತ್ತು.
ಮೋಹನ್ ಚರಣ್ ಮಾಝಿ ಅವರು ಒಡಿಶಾದಲ್ಲಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿಯ ಪ್ರಥಮ ಮುಖ್ಯಮಂತ್ರಿಯಾಗಿದ್ದಾರೆ.
52 ವರ್ಷದ ಮಾಝಿ ಅವರು ಕಿಯೊನಿಹರ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಡಿಸಿಎಂಗಳಾದ ಕೆ.ವಿ.ಸಿಂಗ್ ದೇವ್ ಅವರು ಪಟ್ನಾಗರ್ ಕ್ಷೇತ್ರದಿಂದ,ಪ್ರವತಿ ಪರಿದಾ ಅವರು ನಿಮಪರ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.