ಸುಳ್ಯ:ರಾಜ್ಯ ಒಕ್ಕಲಿಗರ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸುಳ್ಯದ ಕಾಂತಮಂಗಲ ಕುರುoಜಿ ಶ್ರೀ ಗುತ್ಯಮ್ಮ ದೇವಿ ದೈವಸ್ಥಾನದ ಸಭಾಂಗಣದಲ್ಲಿ ಜ.31ರಂದು.ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಅಂಕ ಪಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಹಾಗೂ ಕಾಂತಮಂಗಲ ಗುತ್ಯಮ ದೇವಿ ಕ್ಷೇತ್ರದ ಆಡಳಿತ ಧರ್ಮದರ್ಶಿಗಳಾದ ಡಾ.ರೇಣುಕಾಪ್ರಸಾದ್ ಕೆ.ವಿ. ಪ್ರತಿಭಾ ಪುರಸ್ಕಾರವನ್ನು ವಿತರಿಸಿದರು.

ಎ.ಒ.ಎಲ್.ಇ. ಕಮಿಟಿ ಬಿಯ ಕಾರ್ಯದರ್ಶಿ
ಡಾ.ಜ್ಯೋತಿ ರೇಣುಕಾ ಪ್ರಸಾದ್, ಎ.ಒ.ಎಲ್.ಇ. ಬಿ ಕಮಿಟಿ ಸಿ.ಇ.ಒ.ಡಾ.ಉಜ್ವಲ್ ಯು.ಜೆ., ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಕೆವಿಜಿ ಪ್ರಾಂಶುಪಾಲರಾದ ಸುರೇಶ್, ಕೆ ವಿ ಜಿ ಕೈಗಾರಿಕಾ ತರಬೇತಿ ಸಂಸ್ಥೆ ಉಪ ಪ್ರಾಂಶುಪಾಲರಾದ ದಿನೇಶ್ ಮಡ್ತಿಲ,ರಾಜ್ಯ ಒಕ್ಕಲಿಗರ ಸಂಘದ ಕಾರ್ಯದರ್ಶಿ ಮರಿ ಗೌಡ, ತಾಲೂಕು

ಪಂಚಾಯಿತಿ ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ಮತ್ತಿತರರು ಉಪಸ್ಥಿತರಿದ್ದರು. ಭವಾನಿಶಂಕರ ಅಡ್ತಲೆ ಕಾರ್ಯಕ್ರಮ ನಿರೂಪಿಸಿದರು.ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯಪ್ರಕಾಶ್ ಕುಂಚಡ್ಕ ಅವರನನ್ನು ಡಾ.ರೇಣುಕಾಪ್ರಸಾದ್ ಕೆ.ವಿ.ಸನ್ಮಾನಿಸಿ ಅಭಿನಂದಿಸಿದರು.
