ಸುಳ್ಯ:ಕೆವಿಜಿ ಸಮೂಹ ಸಂಸ್ಥೆಗಳಾದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕೆವಿಜಿ ಅಲೈಡ್ ಹೆಲ್ತ್ ಸೈನ್ಸಸ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋತೆರಪಿ ಹಾಗೂ ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್ ಇದರ ಜಂಟಿ ಆಶ್ರಯದಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು.ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ
ಮುಂಭಾಗದಲ್ಲಿ ನಡೆದ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ನ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಉದ್ಘಾಟಿಸಿದರು. ಎಒಎಲ್ಇಯ ಉಪಾಧ್ಯಕ್ಷೆ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕಾರ್ಯದರ್ಶಿ ಡಾ ಐಶ್ವರ್ಯ ಕೆ. ಸಿ, ಕಾಲೇಜಿನ ಡೀನ್ ಡಾ ನೀಲಾಂಬಿಕೈ ನಟರಾಜನ್, ಡಾ ಶೀಲಾ ಜಿ ನಾಯಕ್, ಡಾ ಗೋಪಿನಾಥ್ ಪೈ,ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಪ್ರಾಂಶುಪಾಲರು ಡಾ ಪ್ರಮೋದ್ ಕೆ.ಜೆ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಇದರ

ಪ್ರಾಂಶುಪಾಲರು ಡಾ ಚಂದ್ರಾವತಿ, ಡಾ ರಂಜಿತ್ ಕೆ. ಬಿ, ಡಾ ಅಪೂರ್ವ ದೊರೆ ಹಾಗೂ ಎಲ್ಲಾ ಎಲ್ಲಾ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಎಲ್ಲಾ ಬೋದಕ ಬೋದಕೇತರ ವೃಂದದವರು ಉಪಸ್ಥಿತರಿದ್ದರು.
ಬಳಿಕ ಸಿಂಗಾರಿಮೇಳ ಪ್ರದರ್ಶನ ಹಾಗೂ ವಿದ್ಯಾರ್ಥಿಗಳಿಂದ ತಿರುವಾದಿರ ನೃತ್ಯ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಓಣಂ ಸದ್ಯ ಆಯೋಜಿಸಲಾಯಿತು.












