ನವದೆಹಲಿ: ಕರ್ನಾಟಕದ ಕೆ.ಎಲ್.ರಾಹುಲ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ. ಆಲ್ರೌಂಡರ್ ರವೀಂದ್ರ ಜಡೇಜ ಏಕದಿನ ತಂಡಕ್ಕೆ ಮರಳಿದ್ದಾರೆ.ಕತ್ತಿನ ಸ್ನಾಯುನೋವಿನಿಂದಾಗಿ ನಾಯಕ ಶುಭಮನ್ ಗಿಲ್ ಅವರು ಸರಣಿಗೆ ಅಲಭ್ಯರಾದ ಕಾರಣ
ರಾಹುಲ್ ಅವರಿಗೆ ಸಾರಥ್ಯ ವಹಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಕೋಲ್ಕತ್ತದಲ್ಲಿ ಮೊದಲ ಟೆಸ್ಟ್ ಪಂದ್ಯದ ವೇಳೆ ಅವರಿಗೆ ಕೊರಳಿಗೆ ನೋವು ಕಾಣಿಸಿಕೊಂಡಿತ್ತು.ಜಡೇಜ ಅವರು ನ್ಯೂಜಿಲೆಂಡ್ ವಿರುದ್ಧ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ ನಂತರ ಏಕದಿನ ತಂಡದಲ್ಲಿ ಆಡಿರಲಿಲ್ಲ.
ಸ್ಪಿನ್ ಆಲ್ರೌಂಡರ್ ಅಕ್ಷರ್ ಪಟೇಲ್ ಜೊತೆ ವೇಗದ ಬೌಲರ್ಗಳಾದ ಜಸ್ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರಿಗೂ ವಿಶ್ರಾಂತಿ ನೀಡಲಾಗಿದೆ.ಕುಲದೀಪ್ ಯಾದವ್ ಮತ್ತು ವಾಷಿಂಗ್ಟನ್ ಸುಂದರ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯಶಸ್ವಿ ಜೈಸ್ವಾಲ್ ತಂಡಕ್ಕೆ ಮರಳಿದ್ದಾರೆ.ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರೂ ತಂಡದಲ್ಲಿದ್ದಾರೆ.
ಋತುರಾಜ್ ಗಾಯಕವಾಡ ಅವರೂ ಅವಕಾಶ ಪಡೆದಿದ್ದಾರೆ. ಉಪನಾಯಕ ಶ್ರೇಯಸ್ ಅಯ್ಯರ್ ಅವರು ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಗಾಯಕವಾಡ ಅವಕಾಶ ಪಡೆದಿದ್ದಾರೆ. ನವೆಂಬರ್ 30 (ರಾಂಚಿ),ಡಿಸೆಂಬರ್ 3 ( ರಾಯಪುರ) ಡಿಸೆಂಬರ್ 6 (ವಿಶಾಖಪಟ್ಟಣ)ರಂದು ಏಕದಿನ ಪಂದ್ಯ ನಡೆಯಲಿದೆ.
ತಂಡ ಇಂತಿದೆ:
ಕೆ.ಎಲ್.ರಾಹುಲ್ (ನಾಯಕ),
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಋತುರಾಜ್ ಗಾಯಕವಾಡ, ಪ್ರಸಿದ್ಧ ಕೃಷ್ಣ, ಅರ್ಷದೀಪ್ ಸಿಂಗ್ ಮತ್ತು ಧ್ರುವ್ ಜುರೇಲ್.













