ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಯ ನಂತರ ಭಾರತ ಪಾಕ್ ಉಗ್ರರ ಮೇಲೆ ತೀವ್ರ ಪ್ರತಿಕಾರದ ಕ್ರಮ ಕೈಗೊಂಡಿತ್ತು. ಇದೀಗ ಭಾರತೀಯ ಸೇನೆ ಪಾಕ್ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದೆ. ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆ ಭಾರತ ಆರಂಭಿಸಿದೆ.ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಗೆ
ಪ್ರತೀಕಾರವಾಗಿ ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಒಂಬತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ. ಈ ಕಾರ್ಯಾಚರಣೆಗೆ ʼಆಪರೇಷನ್ ಸಿಂಧೂರ” ಎಂದು ಹೆಸರಿಡಲಾಗಿದೆ. ಭಾರತೀಯ ಸೇನೆಯ ವಿವಿಧ ಘಟಕಗಳು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿವೆ. ಕೊಟ್ಪಿ, ಮುಜಾಫರ್ಬಾದ್, ಬಹವಲ್ಪುರ್ ಬಳಿ ವಾಯು ದಾಳಿ ನಡೆದಿದೆ. ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತದಿಂದ ದಾಳಿ ನಡೆಸಲಾಗಿದೆ. ದಾಳಿಗಳಲ್ಲಿ ಹಲವು ಮಂದಿ ಉಗ್ರರು ಸತ್ತಿದ್ದಾರೆ ಎಂಬುದಾಗಿ ವರದಿಗಳು ಹೇಳಿವೆ.ಏತನ್ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡಿ, ಪಹಲ್ಗಾಮ್ ದಾಳಿಗೆ ನ್ಯಾಯ ಸಿಗುತ್ತದೆ, ಜೈ ಹಿಂದ್ ಭಾರತ್ ಎಂದಿದ್ದಾರೆ.
ಸದ್ಯ ಪಾಕಿಸ್ತಾನದಲ್ಲಿನ 9ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
ಪಾಕಿಸ್ತಾನದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಸೇನಾ ಚಟುವಟಿಕೆಗಳು ಬಿರುಸುಪಡೆದುಕೊಂಡಿವೆ. ನಿಷೇಧಿತ ಉಗ್ರ ಸಂಘಟನೆಗಳಾದ ಜೈಶ್ –ಎ-ಮೊಹಮ್ಮದ್ (ಜೆಇಎಂ), ಲಷ್ಕರ್–ಎ–ತಯಬಾ (ಎಲ್ಇಟಿ) ಮತ್ತು ಇಜ್ಬುಲ್ ಮುಜಾಹಿದ್ದೀನ್ ಉಗ್ರರ ಪ್ರಧಾನ ಕಚೇರಿಗಳನ್ನು ಹೊಡೆದುರುಳಿಸಿದೆ
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ವಾಯು ಸೇನೆ (ಐಎಎಫ್) ದಾಳಿ ನಡೆಸಿದೆ.ಕಾರ್ಯಾಚರಣೆ ನಡೆದ 9 ಸ್ಥಳಗಳಲ್ಲಿ 4 ಪಾಕಿಸ್ತಾನದಲ್ಲಿದ್ದರೆ ಇನ್ನುಳಿದ ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿವೆ.
ಮಧ್ಯರಾತ್ರಿ 1.44ರ ಸುಮಾರಿಗೆ ಭಾರತ ಕ್ಷಿಪಣಿ ದಾಳಿ ನಡೆಸಿದೆ. ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.











