ಬೆಂಗಳೂರು: ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ಯಶಸ್ವಿಗೊಂಡಿದೆ. ಭಾರತೀಯ ಸೇನೆಯ ಹೆಸರಲ್ಲಿ ಮತ್ತು ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಎಲ್ಲ ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸುವಂತೆ
ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಆಯುಷ್ಯ, ಆರೋಗ್ಯ ದೊರೆಯಲಿ, ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುವುದರಿಂದ ನಮ್ಮ ಯೋಧರಿಗೆ ಸ್ಫೂರ್ತಿ ಬರುತ್ತದೆ. ಅದಕ್ಕಾಗಿ ಈ ಸೂಚನೆ ನೀಡಲಾಗಿದೆ. ದೇವಸ್ಥಾನಗಳಲ್ಲಿ ಬುಧವಾರ ಅಥವಾ ಗುರುವಾರ ವಿಶೇಷ ಸಂಕಲ್ಪದೊಂದಿಗೆ ಪೂಜೆ ನೆರವೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.