ಸುಳ್ಯ:ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಾಲ್ಕು ತರಗತಿ ಕೊಠಡಿಗಳ ನೂತನ ಕಟ್ಟಡದ ಉದ್ಘಾಟನೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ದಾನಿಗಳ ಸಹಕಾರದಿಂದ ಒಸಾಟ್ ಸಂಸ್ಥೆ ಒಂದು ಕೋಟಿ ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಿಸಿ ಕೊಡುಗೆಯಾಗಿ ನೀಡಿದ್ದಾರೆ. ದಾನಿಗಳಾದ ಗುರು ಪಾಂಗಾಳ, ಸಂಧ್ಯಾ ಹಾಗೂ ನಿರ್ಮಲಾ ಜಯ್ ಅವರು ನೂತನ ತರಗತಿ ಕೊಠಡಿಗಳನ್ನು
ಉದ್ಘಾಟಿಸಿದರು.ಓಸಾಟ್ ಸಂಸ್ಥೆಯ ವತಿಯಿಂದ ನಿರ್ಮಿಸಲಾದ ನೂತನ ಶೌಚಾಲಯ ಕಟ್ಟಡವನ್ನು ಈ ಸಂದರ್ಭದಲ್ಲಿ ಉದ್ಘಾಟಿಸಲಾಯಿತು.
ಸುಳ್ಯ ತಹಶೀಲ್ದಾರ್ ಮಂಜುಳಾ ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಮತ್ತಿತರರು ಇದ್ದರು.ಬಳಿಕ ನಡೆಸ ಸಭಾ ಕಾರ್ಯಕ್ರಮದ

ಅಧ್ಯಕ್ಷತೆಯನ್ನು ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಮಂಜುಳಾ ಬಡಿಗೇರ್ ವಹಿಸಿದ್ದರು. ಕಟ್ಟಡ ದಾನಿಗಳಾದ ಗುರು ಪಾಂಗಾಳ, ಸಂಧ್ಯಾ ಮಾತನಾಡಿದರು. ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಒಸಾಟ್ ಸಂಸ್ಥೆಯ ಪ್ರತಿನಿಧಿ ಬಾಲಕೃಷ್ಣ, ಶಾಲಾ ಪ್ರಾಂಶುಪಾಲರಾದ ಮೋಹನ್ ಗೌಡ ಬೊಮ್ಮೆಟ್ಟಿ, ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಅಮೃತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಬಿ ಸದಾಶಿವ, ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಕಲಾ ನೀರಬಿದ್ರೆಶುಭ ಹಾರೈಸಿದರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಬಿ ಸುಧಾಕರ ರೈ, ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಸೂಡ ಅಧ್ಯಕ್ಷ ಕೆ. ಎಂ.ಮುಸ್ತಫ ಜನತಾ, ನ ಪಂ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್ ಅರಂಬೂರು, ಉಪಸ್ಥಿತರಿದ್ದರು.












