ಸುಳ್ಯ:ಸಹಕಾರ ರತ್ನ ಪ್ರಶಸ್ತಿ ಪಡೆದ ಹಿರಿಯ ಸಹಕಾರಿ ಧುರೀಣ ಪಿ. ಸಿ ಜಯರಾಂ ಅವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಸುಳ್ಯದ ಸಹಕಾರ, ಸಾಮಾಜಿಕ, ರಾಜಕೀಯ ಕ್ಷೇತ್ರದ ದಲ್ಲಿ ಅವರು ಸಲ್ಲಿಸಿದ ಸೇವೆ
ಅನನ್ಯವಾದದ್ದು ಎಂದು ಕೆ.ಎಂ.ಮುಸ್ತಫ ಹೇಳಿದರು. ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಉಪಾಧ್ಯಕ್ಷ ಪಿ.ಎಸ್.ಗಂಗಾಧರ,ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಹಾಜಿ ಅಬ್ದುಲ್ ಹಮೀದ್ ಜನತಾ,ಅನ್ಸಾರಿಯಾ ಎಜುಕೇಶನ್ ಸೆಂಟರ್ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ, ನಗರ ಪಂಚಾಯತ್ ನಿಕಟ ಪೂರ್ವ ಸದಸ್ಯರಗಳಾದ ಶರೀಫ್ ಕಂಠಿ, ರಿಯಾಜ್ ಕಟ್ಟೆಕ್ಕಾರ್ಸ್, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಖಜಾಂಚಿ ಕೆ. ಬಿ. ಇಬ್ರಾಹಿಂ,ಯುನೈಟೆಡ್ ಸ್ಪೋರ್ಟ್ಸ್ನ ಸದಸ್ಯ ಬಶೀರ್ ಕಚ್ಚು, ಉದ್ಯಮಿ ಜಾಫರ್ ಸೈಕಲ್ ಮೊದಲಾದವರು ಉಪಸ್ಥಿತರಿದ್ದರು





