ಸುಳ್ಯ:ಗ್ರಾಮ ಪಂಚಾಯತ್ಗಳ ಸಮಸ್ಯೆಗಳ ಬಗ್ಗೆ ಮತ್ತು ಗ್ರಾ.ಪಂ. ಸದಸ್ಯರು ಮುಂದಿರಿಸಿರುವ ಎಲ್ಲಾ ಬೇಡಿಕೆಗಳ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ವತಿಯಿಂದ ಸುಳ್ಯ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ
ಪಂಚಾಯತ್ ರಾಜ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾ.ಪಂ.ಸದಸ್ಯರು ತಮಗೆ ಸಿಕ್ಕಿದ ಅವಕಾಶವನ್ನು ಸದುಪಯೋಗಿಸಿ ಉತ್ತಮ ಕೆಲಸ ಮಾಡಿ ಎಂದು ಅವರು ಹೇಳಿದರು. ಸುಳ್ಯ ತಾಲೂಕು ಗ್ರಾಮಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಅಧ್ಯಕ್ಷತೆ ವಹಿಸಿದ್ದರು.
ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿ,
ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ದ.ಕ.ರಾಜೀವ್ಗಾಂಧಿ ಪಂಚಾಯತ್ ಸಂಘನೆಯ ಅಧ್ಯಕ್ಷರಾದ ಶುಭಾಶ್ಚಂದ್ರ ಕೊಳ್ನಾಡು ಅತಿಥಿಗಳಾಗಿದ್ದರು.
ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಹರೀಶ್ ರೈ ಉಬರಡ್ಕ, ಸುಳ್ಯ ತಾಲೂಕು ಮಹಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೇಶವ ಅಡ್ತಲೆ, ಸಂಚಾಲಕರಾದ ಮಹೇಶ್ ಕುಮಾರ್ ಕರಿಕ್ಕಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಕ್ಕೂಟದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಸ್ವಾಗತಿಸಿದರು.
ಗ್ರಾಮಪಂಚಾಯಿತಿಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು ಜನಪ್ರತಿನಿಧಿಗಳೊಂದಿಗೆ ಮಂಡಿಸಿ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾವಿಸಿ ಬಗೆಹರಿಸುವ ನಿಟ್ಟಿನಲ್ಲಿ ಹಕ್ಕೊತ್ತಾಯ ಮಂಡಿಸುವ ನಿಟ್ಟಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.