ಮಂಗಳೂರು: ಉಡುಪಿ ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ಜನ ಸಂಕಲ್ಪ ಸಭೆಯಲ್ಲಿ ಘೋಷಿಸಿದರು. ಈಗ ನೀಡುತ್ತಿರುವ ಪಡಿತರ ಅಕ್ಕಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬರುತ್ತಿಲ್ಲವೆಂಬ ಹಿನ್ನೆಲೆಯಲ್ಲಿ ಪಡಿತರ
ವ್ಯವಸ್ಥೆಗೆ ಕುಚಲಕ್ಕಿ ನೀಡುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದರು. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಹೇಳಿದರು. ಪ್ರತಿ ಪಡಿತರ ಚೀಟಿದಾರರಿಗೆ ಕುಚ್ಚಲಕ್ಕಿ ವಿತರಣೆ ಮಾಡುವಾಗ ಸುಮಾರು 152 ಕೋಟಿ ರೂಪಾಯಿ ಸರ್ಕಾರಕ್ಕೆ ವಿಶೇಷ ಖರ್ಚು ಬರಲಿದ್ದು ಸಚಿವ ಕೋಟಾರವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಅನೇಕ ಸಭೆಗಳು ನಡೆದಿದ್ದವು. ಇದೀಗ ಮುಖ್ಯಮಂತ್ರಿಗಳ ಘೋಷಣೆಯೊಂದಿಗೆ ಪಡಿತರದಲ್ಲಿ ಕುಚಲಕ್ಕಿ ವಿತರಣೆ ಜಾರಿಗೆ ಬಂದಂತಾಗಿದೆ.