ಬೆಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಮತ್ತು ಕಡಬ ತಾಲೂಕಿನ ಎಪಿಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಸುಮಾರು ಮೂರು ತಿಂಗಳಿನಿಂದ ಪಡಿತರ ಪೂರೈಕೆಯಲ್ಲಿ ವ್ಯತ್ಯಯ ಕಂಡು ಬರುತಿದೆ ಎಂದು ದೂರು ಬಂದಿದೆ.ಆದುದರಿಂದ ಪಡಿತರ ಪೂರೈಕೆಯನ್ನು
ಸಮರ್ಪಕವಾಗಿ ಮಾಡುವಂತೆ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಪಡಿತರ ಆನ್ಲೈನ್ ತಂತ್ರಾಂಶದಲ್ಲಿ ವಿಲ್ಲಿಂಗ್ನೆಸ್ ಆಯ್ಕೆಯನ್ನು ಬ್ಲಾಕ್ ಮಾಡಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಹೆಚ್ಚಿನ ಫಲಾನುಭವಿಗಳಿಗೆ ಇದರಿಂದ ತೊಂದರೆಯಾಗುತ್ತಿದೆ. ಆದುದರಿಂದ ಪಡಿತರವನ್ನು ಸೂಕ್ತ ರೀತಿಯಲ್ಲಿ ಫಲಾನುಭವಿಗಳಿಗೆ ಪೊರೈಸುವಂತೆ ಮತ್ತು ಪಡಿತರ ಬೇಡಿಕೆಗೆ ಆನ್ಲೈನಲ್ಲಿ ವಿಲ್ಲಿಂಗ್ನೆಸ್ ಆಯ್ಕೆಗೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಯಿತು.