ದೆಹಲಿ: 2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.
ಕಾಸರಗೋಡಿನ ಭತ್ತದ ಕೃಷಿಕ ಸತ್ಯನಾರಾಯಣ ಬೇಲೇರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 650ಕ್ಕೂ ಹೆಚ್ಚು ಸಾಂಪ್ರದಾಯಿಕ ಭತ್ತದ ತಳಿಗಳನ್ನು ಸಂರಕ್ಷಿಸುವ ಮೂಲಕ ಭತ್ತದ ತಳಿಗಳ ಸಂರಕ್ಷನಾಗಿ ಗುರುತಿಸಿಗೊಂಡ ಅವರಿಗೆ ಇತರೆ ವಿಭಾಗದಲ್ಲಿ (ಕೃಷಿ ಧಾನ್ಯದ ಅಕ್ಕಿ) ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಜೇನು ಕುರುಬರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸೋಮಣ್ಣ ಅವರಿಗೆ
ಪದ್ಮಶ್ರೀ ಲಭಿಸಿದೆ. ಸಾಂಪ್ರದಾಯಿಕ ಪದ್ಧತಿಯನ್ನು ಮೀರಿ 14ನೇ ವಯಸ್ಸಿನಲ್ಲಿ ಕಾಡು ಆನೆಗಳನ್ನು ಪಳಗಿಸಲು ಪ್ರಾರಂಭಿಸಿದ ಭಾರತದ ಮೊದಲ ಮಹಿಳಾ ಮಾವುತಳಾದ ಅಸ್ಸಾಂನ ಪಾರ್ವತಿ ಬರುವಾ ಅವರಿಗೆ ಸಾಮಾಜಿಕ ಕಾರ್ಯ(ಪ್ರಾಣಿಗಳ) ವಿಭಾಗದಲ್ಲಿ ಪದ್ಮಶ್ರೀ ಲಭಿಸಿದೆ.
ಪ್ರತಿದಿನ ಸೈಕಲ್ನಲ್ಲಿ ಹೊಸ ಸ್ಥಳಗಳಿಗೆ ಪ್ರಯಾಣಿಸುವಾಗ ಬಂಜರು ಭೂಮಿಯಲ್ಲಿ 5,000ಕ್ಕೂ ಹೆಚ್ಚು ಆಲದ, ಮಾವು ಮತ್ತು ಬ್ಲ್ಯಾಕ್ಬೆರಿ ಮರಗಳನ್ನು ನೆಟ್ಟಿರುವ ಪುರುಲಿಯಾದ ಸಿಂಡ್ರಿ ಗ್ರಾಮದ ಬುಡಕಟ್ಟು ಪರಿಸರವಾದಿ ದುಖು ಮಾಝಿ ಅವರಿಗೆ ಸಮಾಜಕಾರ್ಯ (ಪರಿಸರ ಅರಣ್ಯೀಕರಣ) ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಈ ಪೈಕಿ ಕರ್ನಾಟಕದ ಇಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿದೆ. 25 ಸಾವಿರ ಜನರಿಗೆ ಉಚಿತ ಪ್ಲಾಸ್ಟಿಕ್ ಸರ್ಜರಿ ಮಾಡಿರುವ ಧನರಾಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿದೆ.
ಭಾರತದ 75 ನೇ ಗಣರಾಜ್ಯೋತ್ಸವದ ಮುನ್ನಾ ದಿನದಂದು, ಸರ್ಕಾರವು ಈ ಪ್ರಶಸ್ತಿ ವಿಜೇತರ ಹೆಸರು ಪ್ರಕಟಿಸುತ್ತದೆ. ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ – ಪದ್ಮಭೂಷಣ, ಪದ್ಮ ವಿಭೂಷಣ ಮತ್ತು ಪದ್ಮಶ್ರೀ. ಪದ್ಮವಿಭೂಷಣ ಪ್ರಶಸ್ತಿಯನ್ನು ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ. ಪದ್ಮಭೂಷಣವು ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ಮತ್ತು ಪದ್ಮಶ್ರೀ ಪ್ರಶಸ್ತಿಯನ್ನು ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪುರಸ್ಕೃತರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಲೆ, ಶಿಕ್ಷಣ, ಉದ್ಯಮ, ಸಾಹಿತ್ಯ, ವಿಜ್ಞಾನ, ನಟನೆ, ವೈದ್ಯಕೀಯ, ಸಮಾಜ ಸೇವೆ ಮತ್ತು ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ಚಟುವಟಿಕೆಯ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.








