ತಿರುವನಂತಪುರ:ಬಿಜೆಪಿಗೆ ರಾಜೀನಾಮೆ ನೀಡಿರುವುದಾಗಿ ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಅವರು ಗುರುವಾರ ತಿಳಿಸಿದ್ದಾರೆ.ಬಿಜೆಪಿಗೆ ಸೇರ್ಪಡೆಗೊಂಡ ತಮ್ಮ
ನಿರ್ಧಾರ ಆತುರದಲ್ಲಿ ಇಟ್ಟ ತಪ್ಪು ಹೆಜ್ಜೆಯಾಗಿತ್ತು ಎಂದು ಅವರು ಹೇಳಿದ್ದಾರೆ.2024ರ ಮಾರ್ಚ್ 7ರಂದು ಕಾಂಗ್ರೆಸ್ ತೊರೆದಿದ್ದ ಅವರು, ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.ನಾನು ಈಗಾಗಲೇ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.














