ಸುಳ್ಯ:ಎಂ.ಪದ್ಮನಾಭನ್ ನಾಯರ್ ಮಧುವನ ಅವರು ರಚಿಸಿದ ನೀಳ್ಗತೆ ‘ಅಬದ್ಧ ಬದುಕಿನ ಆತ್ಮಕತೆ’ ಕೃತಿ ಬಿಡುಗಡೆ ಕಾರ್ಯಕ್ರಮ ಫೆ. 25ರಂದು ಸುಳ್ಯದ ಸಂಧ್ಯಾರಶ್ಮಿ ಸಭಾಂಗಣದಲ್ಲಿ ನಡೆಯಿತು.ಸಂಧ್ಯಾರಶ್ಮಿ ಸಾಹಿತ್ಯ ಸಂಘ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಕಸಾಪ ಸುಳ್ಯ ತಾಲೂಕು ಹೋಬಳಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ನಡೆದ
ಕಾರ್ಯಕ್ರಮದಲ್ಲಿ ನಿವೃತ್ತ ಕನ್ನಡ ಉಪನ್ಯಾಸಕ ಡಾ. ಕಮಲಾಕ್ಷ ಕೆ. ಕೃತಿ ಬಿಡುಗಡೆ ಮಾಡಿದರು. ಸಂಧ್ಯಾ ರಶ್ಮಿ ಸಾಹಿತ್ಯ ಸಂಘದ ಅಧ್ಯಕ್ಷೆ ಲೀಲಾ ದಾಮೋದರ ಅಧ್ಯಕ್ಷತೆ ವಹಿಸಿದ್ದರು. ಲೇಖಕರಾದ ಡಾ.ಸುಂದರ ಕೇನಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಚಂದ್ರಾವತಿ ಬಡ್ಡಡ್ಕ
ಕೃತಿ ಪರಿಚಯ ಮಾಡಿದರು. ಡಿಸಿಸಿ ಬ್ಯಾಂಕ್ನ ನಿವೃತ್ತ ಸಿ.ಇ.ಒ ಎಂ.ವಿಶ್ವನಾಥ ನಾಯರ್ ಲೇಖಕರ ಪರಿಚಯ ಮಾಡಿದರು. ಪದ್ಮಶ್ರೀ ಪುರಸ್ಕೃತರಾದ ಗಿರೀಶ್ ಭಾರದ್ವಾಜ್, ಕಸಾಪ ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು, ಸುಳ್ಯ ತಾಲೂಕು ಪಿಂಚಣಿದಾರರ ಸಂಘದ ಅಧ್ಯಕ್ಷ ಡಾ.ಎಸ್.ರಂಗಯ್ಯ ಮಾತನಾಡಿದರು. ಕೇಶವ ಸಿ.ಎ ವಂದಿಸಿದರು. ಅಬ್ದುಲ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.