ಮಂಗಳೂರು: ಹಿಂದೂ ಧರ್ಮ, ಸಾಮರಸ್ಯದ ಬದುಕನ್ನು ತನಗೆ ಹೇಳಿಕೊಟ್ಟಿದೆ. ಸಾಮರಷ್ಯ ಕಾಪಾಡುವುದೇ ನಮ್ಮ ಧ್ಯೇಯ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೈಕಂಪಾಡಿ ಎಪಿಎಂಸಿ ಮುಂಭಾಗ ಮಂಗಳವಾರ ಸಂಜೆ ನಡೆದ ಚುನಾವಣಾ
ಪ್ರಚಾರ ಸಭೆಯಲ್ಲಿ ಮಾತನಾಡಿದರು. ತುಳುನಾಡಿನ ಸಂಸ್ಕೃತಿ, ಗ್ರಾಮೀಣ ಸೊಗಡಿನ ಆಟಗಳು ಇವುಗಳ ಜೊತೆಗೆ ಈ ತುಳುನಾಡಿನಲ್ಲಿ ಮೆಡಿಕಲ್ ಹಬ್, ಶಿಕ್ಷಣ ಹಬ್ ಮಾಡಲು ಸಾಧ್ಯ. ಪ್ರವಾಸೋದ್ಯಮ ಬೆಳೆಸಲು ವಿಫುಲ ಅವಕಾಶಗಳಿವೆ. ಇದರಿಂದ ಉದ್ಯೋಗ ಸೃಷ್ಟಿ, ಜಿಲ್ಲೆಯ ಅಭಿವೃದ್ಧಿ ಸಾಧ್ಯ. ಯುವಕರು ನಮ್ಮೂರಲ್ಲೇ ಉದ್ಯೋಗ ಪಡೆಯಲು ಸಾಧ್ಯ. ಹೀಗೆ ಅಭಿವೃದ್ಧಿಯ ಜೊತೆ ಹೆತ್ತವರ ಕನಸೂ ಈಡೇರಲಿದೆ. ಮನೆ ಮನೆಗಳು ಗಟ್ಟಿಯಾದರೆ, ದೇಶ ಸಮೃದ್ಧವಾಗಲಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತನಾಡಿದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಮೇಯರ್ ಮಹಾಬಲ, ಎಂ.ಜಿ. ಹೆಗ್ಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಆಳ್ವ, ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ, ಕೆಪಿಸಿಸಿ ಸದಸ್ಯ ಪೃಥ್ವಿರಾಜ್, ರಾಜೀವ್ ಗಾಂಧಿ ವೈದ್ಯಕೀಯ ವಿವಿ ಸಿಂಡಿಕೇಟ್ ಸದಸ್ಯ ಡಾ. ಇಫ್ತಿಕರ್, ಸುರೇಂದ್ರ ಕಂಬ್ಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ಯಾಲೆಟ್ ಪಿಂಟೋ, ಜಯಲಕ್ಷ್ಮೀ ಪೂಜಾರಿ, ಪ್ರತಿಭಾ ಕುಳಾಯಿ, ಪದ್ಮನಾಭ ಕೋಟ್ಯಾನ್, ಜಯಶೀಲ ಅಡ್ಯಂತಾಯ, ಪುರುಷೋತ್ತಮ ಚಿತ್ರಾಪುರ ಮೊದಲಾದವರು ಉಪಸ್ಥಿತರಿದ್ದರು.
ಪ್ರಚಾರ ಸಭೆಗೆ ಮೊದಲು ಕುಳಾಯಿಯಿಂದ ಬೈಕಂಪಾಡಿಯವರೆಗೆ ಬೃಹತ್ ರೋಡ್ ಶೋ ನಡೆಯಿತು.